ಅರವಿಂದ್ ಕೇಜ್ರಿವಾಲ್ ಅವರ ʻಕೊಲೆʼ ಮಾಡಲು ನಡೆಸಿ ಹುನ್ನಾರ-ಮನೀಶ್ ಸಿಸೋಡಿಯಾ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಬಿಜೆಪಿ ಕಾರ್ಯಕರ್ತರು ಗಲಾಟೆ ನಡೆಸಿ ಭದ್ರತಾ ಪೊಲೀಸರೊಂದಿಗೆ ಘರ್ಷಣೆ ನಡೆಸಿದರು. ಇದರಿಂದ ಕೇಜ್ರಿವಾಲ್ ನಿವಾಸದ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇತ್ತೀಚೆಗಷ್ಟೇ ಬಿಡುಗಡೆಯಾದ ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಅಮ್ ಆದ್ಮಿ ನಾಯಕರು ಟೀಕಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡವನ್ನು ಅವಹೇಳನ ಮಾಡಿರುವುದೇ ಗಲಾಟೆಗೆ ಕಾರಣ ಎನ್ನಲಾಗ್ತಿದೆ.
ದಾಳಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಎಎಪಿ ನಾಯಕ ಮನೀಶ್ ಸಿಸೋಡಿಯಾ, ಕೇಜ್ರಿವಾಲ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಾಗದ ಕಾರಣ ಬಿಜೆಪಿಯು “ಕೊಲೆ ಮಾಡಲು” ಬಯಸಿದೆ ಎಂದು ಗಂಭೀರ ಆರೋಪವನ್ನು ಮಾಡಿದರು. ರಾಜಕೀಯ ಕಾರಣ ಕೇವಲ ಮೇಲ್ನೋಟಕ್ಕೆ ಮಾತ್ರ ಆದ್ರೆ, ಇದು ಸ್ಪಷ್ಟ ಕ್ರಿಮಿನಲ್ ಪ್ರಕರಣವಾಗಿದೆ ಎಂದು ಆರೋಪಿಸಿದರು.
ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮನೆಗೆ ಬಿಜೆಪಿ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲಿಯೇ ಮನೆಗೆ ಆಗಮಿಸಿದ್ದು, ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಿಲ್ಲ ಎಂದು ಅವರನ್ನು ಕೊಲ್ಲಲು ನೋಡುತ್ತಿದ್ದಾರೆ ಎಂದು ಆರೋಪಗಳು ಕೇಳಿ ಬರುತ್ತಿವೆ. ಸಿಎಂ ನಿವಾಸದ ಹೊರಗಿನ ರಿಕೇಡ್ ಬಳಿ ಕಾಶ್ಮೀರಿ ಪಂಡಿತರನ್ನು ಅವಮಾನಿಸಿರುವುದನ್ನು ಖಂಡಿಸಿ ಬಿಜೆಪಿ ಧ್ವಜ ಮತ್ತು ಭಿತ್ತಿ ಪತ್ರಗಳೊಂದಿಗೆ ಪ್ರತಿಭಟನೆ ನಡೆಸುತ್ತಿರುವ ಫೋಟೋಗಳು ವೈರಲ್ ಆಗುತ್ತಿವೆ.
ಬಿಜೆಪಿ ಯುವ ಮೋರ್ಚಾದ ಸುಮಾರು 150-200 ಕಾರ್ಯಕರ್ತರು ಬೆಳಗ್ಗೆ 11:30ಕ್ಕೆ ಸಿಎಂ ನಿವಾಸಕ್ಕೆ ಆಗಮಿಸಿ, ದೆಹಲಿ ಅಸೆಂಬ್ಲಿಯಲ್ಲಿ ಕಾಶ್ಮೀರಿ ಫೈಲ್ ಸಿನಿಮಾ ಕುರಿತು ಮಾಡಿದ ಕಾಮೆಂಟ್‌ಗಳ ಬಗ್ಗೆ ಪ್ರತಿಭಟನೆ ನಡೆಸಿದ್ರು. ಕೂಡಲೇ ಪ್ರತಿಭಟನಾಕಾರರನ್ನು ಅಲ್ಲಿಂದ ಹೊರ ಹಾಕಲಾಯಿತು.70 ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮಾಹಿತಿ ನೀಡಿದ್ದಾರೆ. ಇವೆಲ್ಲವೂ ಸಿಸಿಟಿವಿಯಲ್ಲಿ ದಾಖಲಾಗಿದ್ದು ಎಲ್ಲಾ ಫೋಟೋ ಹಾಗೂ ವಿಡಿಯೋಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.