ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ; ಗಂಭೀರವಾಗಿ ಪರಿಗಣಿಸಿದ ಪ್ರಧಾನಿ ಮೋದಿ
ನವದೆಹಲಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಕರೆಸಿಕೊಂಡಿರುವ ಮೋದಿ, ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಈ ಪ್ರಕರಣದಿಂದಾಗಿ ಕರ್ನಾಟಕ ರಾಜಕಾರಣದಲ್ಲಾಗುವ ಬದಲಾವಣೆಗಳು, ಬಿಜೆಪಿ ಮೇಲೆ ಬೀರುವ ಪರಿಣಾಮದ ಬಗ್ಗೆಯೂ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.
ಈಶ್ವರಪ್ಪರ ರಾಜೀನಾಮೆ ಪಡೆದರೆ ಪಕ್ಷಕ್ಕೆ ಅನುಕೂಲವೋ, ಅನನುಕೂಲವೋ..?. ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರ ಹಿಂದೆ ಬೇರಾ ಯಾವುದಾದರೂ ಷಡ್ಯಂತ್ರ ಇದೆಯಾ..? ಹೀಗೆ ಹಲವಾರು ವಿಷಯಗಳ ಬಗ್ಗೆ ಬಿ.ಎಲ್.ಸಂತೋಷ್ ಜೊತೆ ಮೋದಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.