ಅಲಹಾಬಾದ್ ವಿವಿ ಹಾಸ್ಟೆಲ್‌ನಲ್ಲಿ ಬಾಂಬ್ ತಯಾರಿ; ಸ್ಫೋಟಗೊಂಡು ವಿದ್ಯಾರ್ಥಿಗೆ ಗಾಯ!
ಲಕ್ನೋ; ಹಾಸ್ಟೆಲ್‌ನಲ್ಲಿ ಬಾಂಬ್ ತಯಾರಿಸಲು ಹೋಗಿ, ಈ ವೇಳೆ ಅದು ಸ್ಫೋಟಗೊಂಡು ವಿದ್ಯಾರ್ಥಿಯೊಬ್ಬ ತೀವ್ರವಾಗಿ ಗಾಯಗೊಂಡಿದ್ದಾನೆ. ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಈ ದುರ್ಘಟನೆ ನಡೆದಿದೆ. ಹಾಸ್ಟೆಲ್ ಕೊಠಡಿಯಲ್ಲೇ ವಿದ್ಯಾರ್ಥಿ ಬಾಂಬ್ ತಯಾರಿ ಮಾಡಿದ್ದು, ಅದು ಆತನ ಕೈಯಲ್ಲೇ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದೆ.
ಎಂಎ ವ್ಯಾಸಂಗ ಮಾಡುತ್ತಿರುವ ಪ್ರಭಾತ್ ಯಾದವ್ ಪಿಸಿ ಬ್ಯಾನರ್ಜಿ ಹಾಸ್ಟೆಲ್‌ನಲ್ಲಿ ವಾಸವಿದ್ದ. ಇಲ್ಲೇ ಆತ ಬಾಂಬ್ ತಯಾರಿ ಮಾಡಿದ್ದಾನೆ. ಕೈಯಲ್ಲೇ ಅದು ಸ್ಫೋಟಗೊಂಡಿದ್ದು, ಆತನ ಬಲಗೈಗೆ ತೀವ್ರ ಗಾಯಗಳಾಗಿವೆ. ಈ ಬಗ್ಗೆ ಸಹಾಯಕ ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಯಾದವ್ ಹೇಳಿದ್ದಾರೆ.
ವಿದ್ಯಾರ್ಥಿ ಪ್ರಭಾತ್ ಸ್ಥಿತಿ ಚಿಂತಾಜನಕವಾಗಿದ್ದು, ಎಸ್‌ಆರ್‌ಎನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಭಾತ್ ಯಾದವ್ ವಿರುದ್ಧ ಶೀಘ್ರದಲ್ಲೇ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.