National

ಕೇಂದ್ರದ ಸಚಿವರ ಜೊತೆ ಸಿಎಂ ಬೊಮ್ಮಾಯಿ ಮೀಟಿಂಗ್‌

ನವದೆಹಲಿ: ಬೆಳಗ್ಗೆಯಷ್ಟೆ ದೆಹಲಿಗೆ ಪ್ರಯಾಣ ಬೆಳೆಸಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ರಾಜ್ಯ ಸಂಸದರ ಜೊತೆ ಸಭೆ ನಡೆಸಿದರು. ಖಾಸಗಿ ಹೋಟೆಲ್‌ನಲ್ಲಿ ಕರ್ನಾಟಕದ ಸಂಸದರು ಹಾಗೂ ಸಚಿವರೊಂದಿಗೆ ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು. ಈ ಕುರಿತು ಸಿಎಂ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

ರಾಜ್ಯದ ಸಂಸದರು ಮತ್ತು ಸಚಿವರೊಂದಿಗೆ ಸಭೆ ನಡೆಸಿದೆ.  ರಾಜ್ಯದ ಅಭಿವೃದ್ಧಿ ಮತ್ತು ಇತರ ಕಾರ್ಯಗಳ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಭಗವಂತ್ ಖೂಬಾ, ರಾಜೀವ್ ಚಂದ್ರಶೇಖರ್, ಎ.ನಾರಾಯಣಸ್ವಾಮಿ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಸಿಎಂ ಬೊಮ್ಮಾಯಿ ಅವರು ಟ್ವೀಟ್ ನಲ್ಲಿ ಹೇಳಿಕೊಂಡಿದ್ದಾರೆ.

Share Post