National

ರಾಜನಾಥ್‌ ಸಿಂಗ್‌ ಭೇಟಿಯಾದ ಸಿಎಂ ಬೊಮ್ಮಾಯಿ; ಸೈನಿಕ ಶಾಲೆಗೆ ಅನುಮೋದನೆಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Bavaraja bommai) ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (rajanath sing) ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಇದೇ ವೇಳೆ ಸಂಗೊಳ್ಳಿಯಲ್ಲಿ 189 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ (Sainik school) ಮುಕ್ತಾಯದ ಹಂತದಲ್ಲಿದ್ದು ಈ ಶಾಲೆಯನ್ನು ಸೈನಿಕ ಸ್ಕೂಲ್ ಸೊಸೈಟಿಗೆ ಹಸ್ತಾಂತರಿಸಲು ಅನುವು ಮಾಡಿಕೊಡುವಂತೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಸೈನಿಕ್ ಸ್ಕೂಲ್ ಸೊಸೈಟಿಯ ಅಧಿಕಾರಿಗಳು ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಸೈನಿಕ ಸ್ಕೂಲ್ ಮಾನದಂಡಗಳ ಪಾಲನೆಗೆ ಕ್ರಮ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಈ ಶಾಲೆಯನ್ನು ಸೈನಿಕ್ ಸ್ಕೂಲ್ ಸೊಸೈಟಿಯ ಅಧೀನಕ್ಕೆ ಒಳಪಡಿಸಲು ಅನುಮೋದನೆ ನೀಡುವಂತೆ ಮ ಮುಖ್ಯಮಂತ್ರಿ ಬೊಮ್ಮಾಯಿಯವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಕೋರಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತು ಇತರ ಹಿರಿಯ ಅಧಿಕಾರಿಗಳೂ ಉಪಸ್ಥಿತರಿದ್ದರು.

ಸಿಎಂ ಬಸವರಾಜ ಬೊಮ್ಮಾಯಿಯವರು ಎರಡು ದಿನಗಳ ದೆಹಲಿ ಭೆಟಿಗೆ ತೆರಳಿದ್ದು, ನಿನ್ನೆಯಿಂದ ಹಲವು ನಾಯಕರನ್ನು ಭೇಟಿಯಾಗುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಕೇಂದ್ರ ಸಚಿವರಿಂದ ಅನುಮೋದನೆಗೆ ಮನವಿ ಮಾಡುತ್ತಿದ್ದಾರೆ. ಇದರ ಜೊತೆ ರಾಜ್ಯದ ಜಲ ವಿವಾದದ ವಿಚಾರವಾಗಿಯೂ ಮುಖ್ಯಮಂತ್ರಿ ಚರ್ಚೆ ನಡೆಸಿದ್ದಾರೆ. ಇನ್ನು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲಿರುವ ಸಿಎಂ, ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ನಡೆಸಲಿದ್ದಾರೆ.

Share Post