National

ಟಾಟಾ ಉಕ್ಕು ಕಾರ್ಖಾನೆಯಲ್ಲಿ ಭಾರಿ ಸ್ಫೋಟ

ಜೆಮ್‌ಶೆಡ್‌ಪುರ: ಜೆಮ್‌ಶೆಡ್ಪುರದ ಟಾಟಾ ಉಕ್ಕು ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿದೆ. ಈ ಬಗ್ಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

 

ಜೆಮ್‌ಶೆಡ್‌ಪುರದ ಟಾಟಾ ಉಕ್ಕು ಕಾರ್ಖಾನೆಯ ಘಟಕದ ಇಂದು ಬೆಳಗ್ಗೆ ಈ ಘಟನೆ ನಡೆದಿದೆ.  ಜಿಲ್ಲಾಡಳಿತ ಟಾಟಾ ಉಕ್ಕು ಘಟಕದ ಆಡಳಿತದ ಜತೆಗೂಡಿ ರಕ್ಷಣಾ ಕಾರ್ಯಾಚರಣೆ ಮತ್ತು ಗಾಯಾಳುಗಳ ತ್ವರಿತ ಚಿಕಿತ್ಸೆಗೆ ಕ್ರಮ ಕೈಗೊಳ್ಳುತ್ತಿದೆ ಎಂದು ಸಿಎಂ ಹೇಮಂತ್‌ ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬ್ಯಾಟರಿ ಸ್ಫೋಟದಿಂದಾಗಿ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ ಘಟಕದಲ್ಲಿ ಬೆಂಕಿ ಆವರಿಸಿದ್ದು, ಅಗ್ನಿಶಾಮಕ ದಳದ ಐದು ವಾಹನಗಳು ಸ್ಥಳಕ್ಕೆ ಧಾವಿಸಿವೆ. ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Share Post