National

ರಾಷ್ಟ್ರಪತಿ ಚುನಾವಣೆ; ದ್ರೌಪದಿ ಮುರ್ಮುಗೆ ಬೆಂಬಲ ಘೋಷಿಸಿದ ಮಾಯಾವತಿ

ಲಖನೌ; ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬಿಎಸ್‌ಪಿ ಬೆಂಬಲ ಘೋಷಿಸಿದೆ. ಬಿಎಸ್ಪಿ (ಬಹುಜನ ಸಮಾಜ ಪಕ್ಷ) ಮುಖ್ಯಸ್ಥೆ ಮಾಯಾವತಿ  ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಸಂಸದರು ದ್ರೌಪದಿ ಮುರ್ಮು ಅವರಿಗೆ ಮತ ಹಾಕಲಿದ್ದಾರೆ ಎಂದು ಮಾಯಾವತಿ ಹೇಳಿದ್ದಾರೆ.

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬಿಎಸ್‌ಪಿ ಬೆಂಬಲ ಘೋಷಿಸಿದೆ ಬಿಎಸ್ಪಿ (ಬಹುಜನ ಸಮಾಜ ಪಕ್ಷ) ಮುಖ್ಯಸ್ಥೆ ಮಾಯಾವತಿ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಘೋಷಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಸಂಸದರು ದ್ರೌಪದಿ ಮುರ್ಮಾ ಅವರಿಗೆ ಮತ ಹಾಕಲಿದ್ದಾರೆ ಎಂದು ಮಾಯಾವತಿ ಹೇಳಿದ್ದಾರೆ.

ನಮ್ಮ ಪಕ್ಷ ಮತ್ತು ನಮ್ಮ ಸಿದ್ಧಾಂತವನ್ನು ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ, ನಾವು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ ಎಂದು ಮಾಯಾವತಿ ಹೇಳಿದ್ದಾರೆ.

Share Post