National

ಬಸ್‌-ಟ್ರಕ್‌ ಡಿಕ್ಕಿ; ಐವರು ಸ್ಥಳದಲ್ಲೇ ದುರ್ಮರಣ

ಬಾಲಸೋರ್​: ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಬಸ್‌ ಒಂದು ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ದುರಂತದಲ್ಲಿ ಐದು ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಒಡಿಶಾದ ಬಾಲಾಸೋರ್‌ ಜಿಲ್ಲೆಯ ಸೋರೋ ಬಳಿ ಈ ದುರಂತ ಸಂಭವಿಸಿದೆ.

  ಉಡಾಲಾದಿಂದ ಭವನೇಶ್ವರಕ್ಕೆ ತೆರಳುತ್ತಿದ್ದ ಬಸ್‌, ಸೋರೋ  ಬಳಿ ಎದುರಿಗೆ ಬಂದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಇದ್ರಿಂದಾಗಿ ಬಸ್‌ ಪಲ್ಟಿಯಾಗಿದೆ. ಬಸ್‌ ಜನರು ತುಂಬಿದ್ದರು. ಹೀಗಾಗಿ ದೊಡ್ಡ ದುರಂತ ಸಂಭವಿಸಿದೆ. ಒಂದು ವರ್ಷದ ಮಗು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿ ಇನ್ನೂ 22 ಮಂದಿಗೆ ಗಾಯಗಳಾಗಿವೆ. ತೀವ್ರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಬಸ್‌ ಚಾಲಕ ಅತಿವೇಗವಾಗಿ ಬಸ್‌ ಓಡಿಸಿದ್ದರಿಂದ ಈ ದುರಂತ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸೋರೋ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share Post