National

ಕಾವೇರಿ ವಿವಾದ; ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ; ಕಾವೇರಿ ನೀರಿಗಾಗಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಇಂದು ನಡೆಯಿತು. ನ್ಯಾಯಾದೀಶ್​​ ಬಿ.ಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಎರಡೂ ಕಡೆ ವಾದ ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಮುಂದೂಡಿದ್ದಾರೆ.

ಎರಡು ರಾಜ್ಯಗಳ ಜಲಾಶಯಗಳ ವಾಸ್ತವದ ವರದಿ ನೀಡಬೇಕು. ಈ ಮಧ್ಯಂತರ ಅವಧಿಯಲ್ಲಿ ಸಭೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಸೂಚನೆ ಕೊಟ್ಟಿದೆ. ೧೫ ದಿನಗಳ ೧೦ ಸಾವಿರ ಕ್ಯೂಸೆಕ್‌ ನೀರು ಬಿಡಬೇಕಿತ್ತು. ಹಾಗಂತ ಕಾವೇರಿ ಪ್ರಾಧಿಕಾರ ಹೇಳಿತ್ತು. ಆದ್ರೆ, ಕರ್ನಾಟಕ ೪೦ ಟಿಎಂಸಿ ನೀರು ಬಿಡುತ್ತಿಲ್ಲ ಅಂತ ತಮಿಳುನಾಡು ಪರ ವಕೀಲ ಮುಕುಲ್‌ ರೋಹಟಗಿ ವಾದಿಸಿದರು.

ಆದ್ರೆ ಕರ್ನಾಟಕದ ಪರ ವಾದ ಮಂಡಿಸಿದ ವಕೀಲ ಶ್ಯಾಮ್‌ ದಿವಾನ್‌, ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ನೀರು ಹರಿಸಿದ್ದೇವೆ. ತಮಿಳುನಾಡು ವ್ಯರ್ಥ ಆರೋಪ ಮಾಡುತ್ತಿದೆ ಎಂದು ಹೇಳಿದರು. ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ನಾವು ನಮ್ಮ ಸಮಸ್ಯೆಗಳನ್ನು ಹೇಳಲು ಪ್ರಯತ್ನ ಮಾಡಿದೆವು. ಆದ್ರೆ ತಮಿಳುನಾಡಿನ ಅಧಿಕಾರಿಗಳು ಅದನ್ನು ಕೇಳದೆ ಸಭೆಯಿಂದ ಹೊರನಡೆದಿದ್ದಾರೆ. ಕರ್ನಾಟಕದಲ್ಲಿ ಕಡಿಮೆ ಮಳೆಯಾಗಿದೆ. ಹೀಗಾಗಿ ಹೆಚ್ಚಿನ ನೀರು ಬಿಡಲು ಆಗುತ್ತಿಲ್ಲ ಎಂದು ಶ್ಯಾಮ್‌ ವಾದ ಮಂಡಿಸಿದ್ದಾರೆ.

Share Post