National

ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ; ತಮಿಳುನಾಡು ಕ್ಯಾತೆ

ದೆಹಲಿ; ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸಲು CWRC ಆದೇಶದ ಅವಧಿ ಮುಕ್ತಾಯವಾಗಿದೆ, ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಕಚೇರಿಯಲ್ಲಿ ಸಭೆ ನಡೆಸಲಾಗುತ್ತಿದೆ. ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳು ವರ್ಚುವಲ್ ಮೂಲಕ ಭಾಗಿಯಾಗಿದ್ದಾರೆ.
ಈ ಸಭೆಯಲ್ಲೂ ತಮಿಳುನಾಡು ಅಧಿಕಾರಿಗಳು ನೀರಿಗಾಗಿ ಕ್ಯಾತೆ ತೆಗೆದಿದ್ದಾರೆ. ಪ್ರತಿದಿನ 12,500 ಕ್ಯೂಸೆಕ್ ನೀರು ಬಿಡುವಂತೆ ವಾದ ಮಾಡುತ್ತಿದ್ದಾರೆ. ಬಾಕಿ ಉಳಿದಿರುವ ಸುಮಾರು 83 ಟಿಎಂಸಿ ನೀರನ್ನು ಕೂಡಲೇ ರಿಲೀಸ್‌ ಮಾಡಲು ಆದೇಶಿಸಬೇಕೆಂದು ಮನವಿ ಮಾಡಿದ್ದಾರೆ.
ಇದುವರೆಗೂ ಕರ್ನಾಟ 123 ಟಿಎಂಸಿ ನೀರು ಹರಿಸಬೇಕಿತ್ತು. ಆದ್ರೆ ಈವರೆಗೂ ಕೇವಲ 40 ಟಿಎಂಸಿ ನೀರು ಹರಿಸಿದ್ದಾರೆ. ಉಳಿದ 83 ಟಿಎಂಸಿ ನೀರು ಬಿಡುಗಡೆ ಮಾಡಬೇಕೆಂದು ತಮಿಳುನಾಡು ವಾದಿಸುತ್ತಿದೆ. ಆದ್ರೆ ಕರ್ನಾಟಕದ ಅಧಿಕಾರಿಗಳು ರಾಜ್ಯದ ಶಲಾಶಯಗಳ ವಾಸ್ತವದ ಪರಿಸ್ಥಿತಿ ಅರ್ಥ ಮಾಡಿಸುವ ಪ್ರಯತ್ನ ಮಾಡಿದ್ದಾರೆ.

ಸೆ.25ರ ವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಟ್ಟು ಒಳಹರಿವಿನ ಕೊರತೆ 53.04% ಆಗಿದೆ. ಕರ್ನಾಟಕ ಸರ್ಕಾರವು ದಿನಾಂಕ 13.09.2023 ರ ಆದೇಶದಲ್ಲಿ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಈ ಅಂಶವನ್ನು ಸಮಿತಿ ಗಂಭೀರವಾಗಿ ಪರಿಗಣಿಸಬೇಕೆಂದು CWRC ಮುಂದೆ ಕರ್ನಾಟಕ ವಾಸ್ತವ ಸ್ಥಿತಿ ಸಲ್ಲಿಕೆ ಮಾಡಿದೆ.

 

Share Post