National

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ; ನಾಳೆ ಸುಪ್ರೀಂನಲ್ಲಿ ವಿಚಾರಣೆ

ನವದೆಹಲಿ; ಕಾವೇರಿ ನೀರು ಬಿಡುವ ವಿಚಾರದಲ್ಲಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ನಾಳೆ ಈ ಅರ್ಜಿ ವಿಚಾರಣೆಗೆ ಬರಲಿದೆ. ಸುಪ್ರೀಂ ಸೂಚಿಸಿದಷ್ಟು ನೀರು ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ಸರ್ಕಾರ ಕಾನೂನು ಕ್ಯಾತೆ ತೆಗೆದಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಈ ಬಗ್ಗೆ ಅಫಿಡವಿಟ್‌ ಸಲ್ಲಿಕೆ ಮಾಡಿದೆ. 

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ನಾವು ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಬಾರಿ ಮಳೆಯ ಕೊರೆತೆಯಾಗಿದೆ. ಈ ಸಂಕಷ್ಟದ ನಡುವೆಯೂ ನಾವು ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೇವೆ. ಈ ಮೂಲಕ ಪ್ರಾಧಿಕಾರದ ಆದೇಶ ಪಾಲನೆ ಮಾಡಿದ್ದೇವೆ. ಆದರೂ ಕೂಡಾ ತಮಿಳುನಾಡು ಸರ್ಕಾರ, ಇನ್ನೂ ನೀರು ಬೇಕು ಎಂದು ಕೇಳುತ್ತಿದೆ ಎಂದು ಕರ್ನಾಟಕ ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.

 

 

Share Post