National

ಕೋಲ್ಕತ್ತಾದಲ್ಲಿ ಭೀಕರ ಮಾರಣ ಹೋಮ ಪ್ರಕರಣ; ತನಿಖೆ ಚುರುಕುಗೊಳಿಸಿದ ಸಿಬಿಐ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಮ್‌ಪುರ್‌ಹಟ್‌ ಜಿಲ್ಲೆಯಲ್ಲಿ ಟಿಎಂಸಿ ಮುಖಂಡನ ಹತ್ಯೆ ಪ್ರತೀಕಾರವಾಗಿ ನಡೆದ ಎಂಟು ಮಂದಿ ಕೊಲೆ ಪ್ರಕರಣ ತನಿಖೆ ಚುರುಕುಗೊಂಡಿದೆ. ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳ ತಂಡ ಇಂದು ಘಟನೆ ನಡೆದ ಬೋಗ್‌ತುಇ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ರಾಮ್‌ಪುರಹಾಟ್‌ನ ಪಂಚಾಯಿತಿಯ ಟಿಎಂಸಿ ಸದಸ್ಯನ ಹತ್ಯೆಯ ನಂತರ ಬೋಗ್‌ತುಇ ಗ್ರಾಮದ ಹತ್ತಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಕೃತ್ಯದಲ್ಲಿ ಇಬ್ಬರು ಮಕ್ಕಳು, ಐವರು ಮಹಿಳೆಯರು ಸೇರಿ ಎಂಟು ಜನರನ್ನು ಸಜೀವವಾಗಿ ಸುಡಲಾಗಿತ್ತು. ಇದಾದ ನಂತರ ಪಶ್ಚಿಮಬಂಗಾಳ ಸರ್ಕಾರ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿತ್ತು. ಆದ್ರೆ, ಇದನ್ನು ಸಿಬಿಐಗೆ ವಹಿಸಬೇಕೆಂದು ಪಶ್ಚಿಮ ಬಂಗಾಳ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಲ್ಕತ್ತಾ ಹೈಕೋರ್ಟ್‌ ಸಿಜೆ, ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸೂಚನೆ ನೀಡಿದ್ದರು.

ಕೋರ್ಟ್‌ ಸೂಚನೆಯಂತೆ ಪ್ರಕರಣ ಈಗ ಸಿಬಿಐ ಸುಪರ್ದಿಗೆ ಬಂದಿದೆ. ಸಿಬಿಐ ಅಧಿಕಾರಿಗಳು ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ. ಬೆಂಕಿಬಿದ್ದ ಮನೆಗಳ ಸ್ಥಳಕ್ಕೆ ಭೇಟಿ ನೀಡಿದ್ದ ಸಿಬಿಐ ಅಧಿಕಾರಿಗಳ ತಂಡ, ಸ್ಥಳ ಪರಿಶೀಲನೆ ನಡೆಸಿತು. ನಂತರ ಘಟನೆ ದಿನ ಇದ್ದ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿಯಿಂದ ಮಾಹತಿಯನ್ನೂ ಪಡೆಯಿತು.

Share Post