National

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.3ರಷ್ಟು ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರದ ನೌಕರರ ತುಟ್ಟಿ ಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ.

ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರಿಗೆ ಇದರ ಲಾಭ ದೊರೆಯಲಿದೆ. ಪ್ರಸ್ತುತ ಮೂಲ ವೇತನದ ಶೇಕಡ 31ರಷ್ಟು ಮೊತ್ತವನ್ನು ತುಟ್ಟಿ ಭತ್ಯೆ ಅಥವಾ ಪರಿಹಾರವಾಗಿ ನೀಡಲಾಗುತ್ತಿತ್ತು. ಸರ್ಕಾರದ ಅನುಮೋದನೆಯ ಬಳಿಕ ಡಿಎ ಶೇಕಡಾ 34ಕ್ಕೆ ಏರಿಕೆಯಾದಂತಾಗಿದೆ. 7ನೇ ವೇತನ ಆಯೋಗದ ಶಿಫಾರಸಿನ ಆಧಾರದ ಮೇಲೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ.

Share Post