National

ನ್ಯೂ ಮೀಡಿಯಾ ನಿಯಂತ್ರಣಕ್ಕೆ ಕಾನೂನು, ಶೀಘ್ರವೇ ಡಿಜಿಟಲ್‌ ಮಾಧ್ಯಮಗಳಿಗೂ ಮಾನ್ಯತೆ; ಅನುರಾಗ್‌ ಠಾಕೂರ್‌

ಜೈಪುರ್; ದೇಶದಲ್ಲಿ ಡಿಜಿಟಲ್‌ ಮಾಧ್ಯಮಗಳು ಬೆಳೆಯುತ್ತಿವೆ. ಈ ಕಾರಣದಿಂದಾಗಿ ಡಿಜಿಟಲ್‌ ಮಾಧ್ಯಮಗಳ ನಿಯಂತ್ರಣಕ್ಕೆ ಹೊಸ ಕಾನೂನು ತಂದು, ಡಿಜಿಟಲ್‌ ಮಾಧ್ಯಮಗಳಿಗೂ ಸರ್ಕಾರದಿಂದ ಮಾನ್ಯತೆ ನೀಡಲಾಗುತ್ತದೆ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಈ ಬಗ್ಗೆ ಜೈಪುರದಲ್ಲಿ ಮಾತನಾಡಿರುವ ಅವರು, ಡಿಜಿಟಲ್‌ ಮಾಧ್ಯಮಗಳಿಗೆ ಮುಂದೆ ಉತ್ತಮ ಭವಿಷ್ಯವಿದೆ. ಅದರ ಜೊತೆಗೆ ಸಾಕಷ್ಟು ಸವಾಲುಗಳೂ ಇವೆ. ಹೀಗಾಗಿ ಇವುಗಳನ್ನು ಸರಿದೂಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಅದಕ್ಕಾಗಿಯೇ ಹೊಸ ಕಾನೂನು ರೂಪಿಸಲಾಗುತ್ತಿದೆ ಎಂದು ಅವರು ಹೇಳಿದ್ರು.

ಪ್ರೆಸ್ ಮತ್ತು ರಿಜಿಸ್ಟ್ರೇಶನ್ ಕಾಯ್ದೆ 1867ರ ಬದಲಿಗೆ ಹೊಸ ಕಾನೂನು ಜಾರಿ ಮಾಡುತ್ತೇವೆ. ಈ ಮೂಲಕ ಪತ್ರಿಕೆಗಳ ನೋಂದಣಿ ಪ್ರಕ್ರಿಯೆ ಸರಳಗೊಳಿಸಲಾಗುತ್ತೆ. ಇದರಿಂದ ಒಂದು ವಾರದಲ್ಲಿ ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅನುರಾಗ್‌ ಠಾಕೂರ್‌ ಹೇಳಿದ್ದಾರೆ. ಮುದ್ರಣ, ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದ ಎಲ್ಲಾ ನೀತಿಗಳನ್ನೂ ಒಂದೇ ಸೂರಿನಡಿ ತರಲಾಗುವುದು ಎಂದು ಹೇಳಿದರು.

Share Post