National

ಕೊವಿಡ್‌ ಹೆಚ್ಚಳ; ಕರ್ನಾಟಕ ಸೇರಿ 5 ರಾಜ್ಯಗಳಿಗೆ ಎಚ್ಚರಿಕೆ

ನವದೆಹಲಿ; ದೇಶಾದ್ಯಂತ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ 5 ರಾಜ್ಯಗಳಿಗೆ ಪತ್ರ ಬರೆದಿದೆ. ಕೊರೊನಾ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಪರೀಕ್ಷೆಗಳನ್ನು ಹೆಚ್ಚಿಸಬೇಕು ಎಂದು ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಸಚಿವಾಲಯ ತಮಿಳುನಾಡು, ಕೇರಳ, ತೆಲಂಗಾಣ, ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಗಳಿಗೆ ಈ ಬಗ್ಗೆ ಪತ್ರ ಬರೆದಿದೆ.  ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಹೆಚ್ಚಿಸಲು ತಿಳಿಸಿದ್ದಾರೆ. ಜನರಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಹಾಗೂ ಉಸಿರಾಟದ ಸಮಸ್ಯೆ ಇದ್ದಲ್ಲಿ ತಕ್ಷಣವೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದರಿಂದ ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಬಹುದು ಎಂದಿದ್ದಾರೆ.

Share Post