NationalScienceTechTechnology

ನಭಕ್ಕೆ ಹಾರಿದ ಚಂದ್ರಯಾನ-3; ಯಶಸ್ವಿ ಉಡಾವಣೆ

ಶ್ರೀಹರಿಕೋಟಾ; ಚಂದ್ರಯಾನ-3 ಯಶಸ್ವಿ ಉಡಾವಣೆ ಮಾಡಲಾಗಿದೆ. ಮಧ್ಯಾಹ್ನ 2.35ಕ್ಕೆ ಸರಿಯಾಗಿ ಚಂದ್ರಯಾನ ಉಡಾವಣೆ ಮಾಡಲಾಯಿತು. ಸುರಕ್ಷಿತವಾಗಿ ಚಂದ್ರಯಾನ-3 ತನ್ನ ಕಕ್ಷೆ ಸೇರಿದೆ. 

ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಚಂದ್ರಯಾನ-3 ಉಡಾವಣೆ ಮಾಡಲಾಯಿತು. ಯಶಸ್ವಿ ಲ್ಯಾಂಡಿಂಗ್ ಆದರೆ ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಈ ಸಾಧನೆಯನ್ನು ಮಾಡಿದ ನಾಲ್ಕನೇ ದೇಶವಾಗಿ ಭಾರತ ಹೊರಹೊಮ್ಮಲಿದೆ.

ಚಂದ್ರಯಾನ-3ನ್ನು 615 ಕೋಟಿ ರೂಪಾಯಿ ಮೊತ್ತದಲ್ಲಿ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಲ್ಯಾಂಡರ್ ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್‌ಗೆ ಸುಮಾರು 250 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಉಡಾವಣೆಗೆ 365 ಕೋಟಿ ರೂಪಾಯಿ ಖರ್ಚಾಗುತ್ತದೆ ಎಂದು ತಿಳಿದುಬಂದಿದೆ.

 

Share Post