ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪ್ರಾಯೋಗಿಕ ಸಂಚಾರ ಶುರು
ಚೆನ್ನೈ; ನವೆಂಬರ್ ಹನ್ನೊಂದರಿಂದ ಚೆನ್ನೈ-ಮೈಸೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಮಾಡಲಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಈ ರೈಲಿಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಈ ರೈಲಿನ ಪ್ರಾಯೋಗಿಕ ಸಂಚಾರ ಆರಂಭಿಸಲಾಗಿದೆ. ಇಂದು ಬೆಳಗ್ಗೆ 5.50ಕ್ಕೆ ಈ ರೈಲು ಚೆನ್ನೈ ರೈಲು ನಿಲ್ದಾಣದಿಂದ ಹೊರಟಿದೆ.
ಚೆನ್ನೈ – ಮೈಸೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಲಿದೆ.