ತಮಿಳು ನಟ ವಿಕ್ರಂಗೆ ಹೃದಯಾಘಾತವಾಗಿಲ್ಲ; ಕಾವೇರಿ ಆಸ್ಪತ್ರೆ ಸ್ಪಷ್ಟನೆ
ಚೆನ್ನೈ; ತಮಿಳು ಖ್ಯಾತ ನಟ ವಿಕ್ರಮ್ ಅವರಿಗೆ ಹೃದಯಾಘಾತವಾಗಿದೆ ಎಂದು ಸುದ್ದಿಯಾಗಿತ್ತು. ಆದ್ರೆ ಅವರಿಗೆ ಚಿಕಿತ್ಸೆ ನೀಡುತ್ತಿರುವ ಚೆನ್ನೈನ ಕಾವೇರಿ ಆಸ್ಪತ್ರೆ ಅದನ್ನು ಅಲ್ಲಗೆಳೆದಿದೆ. ವಿಕ್ರಮ್ ಅವರಿಗೆ ಸಣ್ಣ ಪ್ರಮಾಣದಲ್ಲಿ ಎದೆ ನೋವು ಕಾಣಿಸಿಕೊಂಡಿತ್ತಷ್ಟೇ, ಅವರಿಗೆ ಹೃದಯಾಘಾತವಾಗಿಲ್ಲ ಎಂದು ಕಾವೇರಿ ಆಸ್ಪತ್ರೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ವಿಕ್ರಮ್ ಅವರ ಮಗ ಧ್ರುವ ಕೂಡಾ ಮಾತನಾಡಿದ್ದು, ವಿಕ್ರಮ್ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು ಹಾಗೂ ಸಣ್ಣ ಪ್ರಮಾಣದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನಟ ವಿಕ್ರಮ್ ‘ಪೊನ್ನಿಯಿನ್ ಸೆಲ್ವನ್’ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೆಲ ಸಮಯದ ಬಳಿಕ ಅನಾರೋಗ್ಯದಿಂದ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.