ಹವಾಮಾನ ವೈಪರೀತ್ಯ; ಅಮರನಾಥ ಯಾತ್ರೆ ತಾತ್ಕಾಲಿಕ ರದ್ದು
ನವದೆಹಲಿ; ಜುಲೈ 1ರಿಂದ ಪ್ರಾರಂಭವಾಗಿರುವ ಈ ವರ್ಷದ ಅಮರನಾಥ ಯಾತ್ರೆಯನ್ನು ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಕೆಲ ದಿನಗಳಿಂದ ವಿಪರೀತ ಮಳೆಯ ಜೊತೆಗೆ ಹಿಮವೂ ಬೀಳುತ್ತಿದೆ. ಇನ್ನೂ ರೆಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ಪ್ರತಿವರ್ಷ 62 ದಿನಗಳ ಕಾಲ ಅಮರನಾಥ ಯಾತ್ರೆಗೆ ಅವಕಾಶ ನೀಡಲಾಗುತ್ತದೆ. ಮೊದಲ ಬ್ಯಾಚ್‍ನಲ್ಲಿ 7 ರಿಂದ 8 ಸಾವಿರ ಮಂದಿಗೆ ಅವಕಾಶ ನೀಡಲಾಗಿದೆ. ಬೇಸ್ ಕ್ಯಾಂಪ್‍ನಿಂದ ಸುಮಾರು 13,000 ಅಡಿ ಎತ್ತರದಲ್ಲಿರುವ ಅಮರನಾಥ ಗುಹೆಯ ದೇಗುಲಕ್ಕೆ 12 ಕಿಲೋ ಮೀಟರ್ ಪ್ರಯಾಣ ಮಾಡಬೇಕು. ಆದ್ರೆ ಮಳೆಯ ಕಾರಣದಿಂದಾಗಿ ತಾತ್ಕಾಲಿಕವಾಗಿ ಯಾತ್ರೆ ಸ್ಥಗಿತ ಮಾಡಲಾಗಿದೆ.
ಗುಹೆಯಲ್ಲಿ ನೈಸರ್ಗಿಕವಾಗಿ ಮಂಜುಗಡ್ಡೆಯ ಶಿವಲಿಂಗ ರೂಪಗೊಳ್ಳುತ್ತದೆ. ಅದನ್ನು ನೋಡಲು ಲಕ್ಷಾಂತರ ಭಕ್ತರು ಇಲ್ಲಿಗೆ ಬರುತ್ತಾರೆ. ಆಗಸ್ಟ್ 31ಕ್ಕೆ ಈ ಯಾತ್ರೆ ಮುಕ್ತಾಯಗೊಳ್ಳಲಿದೆ.