National

ಮೇಘ ಸ್ಫೋಟಕ್ಕೆ ಅಮರನಾಥ ತತ್ತರ; ಮೃತರ ಸಂಖ್ಯೆ 15ಕ್ಕೆ ಏರಿಕೆ, ಕರ್ನಾಟಕದ ಯಾತ್ರಾರ್ಥಿಗಳು ಸೇಫ್‌

ಶ್ರೀನಗರ; ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾದ ಮೇಘಸ್ಫೋಟಕ್ಕೆ ಅಮರನಾಥ ಯಾತ್ರಿಕರು ತತ್ತರಿಸಿದ್ದಾರೆ. ಕಳೆದ ಸಂಜೆ ಏಕಾಏಕಿ ಸೃಷ್ಟಿಯಾದ ಪ್ರವಾಹದಿಂದ ನದಿ ತಟದಲ್ಲಿ ಹಾಕಲಾಗಿದ್ದ ಅಮರನಾಥ ಯಾತ್ರಿಗಳ ಶಿಬಿರಗಳು ಕೊಚ್ಚಿ ಹೋಗಿವೆ. ಹದಿನೈದು ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ನಲವತ್ತು ಯಾತ್ರಿಕರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ.

ಮೈಸೂರಿನಿಂದ ಇಪ್ಪತ್ತು ಮಂದಿ ವಕೀಲರು ಅಮರನಾಥ ಯಾತ್ರೆಗೆ ತೆರಳಿದ್ದರು. ಅವರೆಲ್ಲರೂ ಸುರಕ್ಷಿತವಾಗಿದ್ದು, ವಾಪಸ್‌ ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ರಾಜ್ಯದಿಂದ ಅಮರನಾಥ ಯಾತ್ರೆಗೆ ತೆರಳಿದವರ ರಕ್ಷಣೆಗಾಗಿ ರಾಜ್ಯ ಸರ್ಕಾರ ಹೆಲ್ಫ್‌ಲೈನ್‌ ಕೂಡಾ ತೆರೆದಿದೆ.  ದೇಶಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡು ಭೀಕರ ಪ್ರವಾಹ ಸೃಷ್ಟಿಯಾಗಿದೆ. ಕಣಿವೆ ತಟದಲ್ಲಿ ಹರಿಯುತ್ತಿದ್ದ ನದಿ ಒಂದೇ ಸಮನೆ ಉಕ್ಕಿ ಹರಿದಿದ್ದು ಅಮರನಾಥ ಯಾತ್ರಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈಗಾಗಲೇ ಘಟನೆಯಲ್ಲಿ 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಗೊಂಡ ಹಲವರನ್ನು ಏರ್‌ಲಿಫ್ಟ್‌ ಮಾಡಿ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಮರನಾಥ ಯಾತ್ರೆಗೆ ಜೂನ್ 30 ರಂದು ಚಾಲನೆ ಸಿಕ್ಕಿತ್ತು. ಮೊದಲ ತಂಡದಲ್ಲಿ 4,890 ಭಕ್ತರು ಯಾತ್ರೆ ಕೈಗೊಂಡಿದ್ದರು. 43 ದಿನಗಳ ಯಾತ್ರೆಯು ಕಳೆದ ಗುರುವಾರ ಆರಂಭವಾಗಿದ್ದು ಅಗಸ್ಟ್ 11 ರಂದು ಕೊನೆಗೊಳ್ಳಲಿದೆ.

 

Share Post