National

ಬಿಜೆಪಿ ಕಾರ್ಯಕಾರಿಣಿ ನಂತರ ಸಂಪುಟ ವಿಸ್ತರಣೆ; ಸಿಎಂ ಬೊಮ್ಮಾಯಿ

ನವದೆಹಲಿ; ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಂತರ ಸಂಪುಟ ವಿಸ್ತರಣೆ ಬಗ್ಗೆ ಯೋಚನೆ ಮಾಡೋಣ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಅವರು, ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. 

     ರಾಜ್ಯ ಸಂಪುಟ ವಿಸ್ತರಣೆಯ ಅವಶ್ಯಕತೆ ಹಾಗೂ ಬರುತ್ತಿರುವ ಒತ್ತಡದ ಬಗ್ಗೆ ಜೆ.ಪಿ.ನಡ್ಡಾ ಅವರ ಜೊತೆ ವಿವರವಾಗಿ ಮಾತನಾಡಿದ್ದೇನೆ. ಅವರು ಎಲ್ಲಾ ಮಾಹಿತಿಯನ್ನೂ ಪಡೆದುಕೊಂಡಿದ್ದಾರೆ. ಕಾರ್ಯಕಾರಿಣಿ ಸಭೆಗೆ ಬಂದಾಗ ಈ ಬಗ್ಗೆ ಅಂತಿಮ ನಿರ್ಧಾರ ಮಾಡೋಣ ಎಂದು ನಡ್ಡಾ ಹೇಳಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಜೊತೆ ಚರ್ಚೆ ಮಾಡಿದ ನಂತರ ಅಂತಿಮ ತೀರ್ಮಾನ ಕೈಗೊಳೋಣ ಎಂಬುದಾಗಿಯೂ ಜೆ.ಪಿ.ನಡ್ಡಾ ತಿಳಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

   ದೆಹಲಿ ಭೇಟಿ ಉದ್ದೇಶ ಫಲಪ್ರದವಾಗಿದೆ ಎಂದು ಸಿಎಂ ಬೊಮ್ಮಾಯಿ, ಜಲಶಕ್ತಿ, ಪರಿಸರ ಖಾತೆ, ಹಣಕಾಸು ಇಲಾಖೆ, ರಕ್ಷಣಾ ಇಲಾಖೆಯ ಸಚಿವರನ್ನು ಭೇಟಿ ಮಾಡಿದ್ದೇನೆ. ಎಲ್ಲರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದರು.

Share Post