ಸಚಿವ ಅಶ್ವತ್ಥನಾರಾಯಣ್-ಎಂ.ಬಿ.ಪಾಟೀಲ್ ಭೇಟಿ ನನಗೆ ಗೊತ್ತಿಲ್ಲ; ಸಿಎಂ ಬೊಮ್ಮಾಯಿ
ದೆಹಲಿ: ಸಚಿವ ಅಶ್ವತ್ಥನಾರಾಯಣ್ ಅವರು ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲರನ್ನು ಭೇಟಿ ಮಾಡಿರುವ ಮಾಹಿತಿ ನನಗೆ ಸಿಕ್ಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಎಂ.ಬಿ.ಪಾಟೀಲ್ ಭೇಟಿಯ ಬಗ್ಗೆ ನನಗೆ ಗೊತ್ತಿಲ್ಲ. ಆದ್ರೆ ಇದಕ್ಕೆ ವಿಶೇಷ ಮಹತ್ವ ನೀಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಸಚಿವ ಅಶ್ವತ್ಥನಾರಾಯಣ್ ಅವರು ಎಂ.ಬಿ.ಪಾಟೀಲ್ ಮನೆಗೆ ಭೇಟಿ ನೀಡಿದ್ದರು. ತಮ್ಮ ಇಲಾಖೆಗಳಲ್ಲಿ ನಡೆದಿರುವ ಹಗರಣಗಳ ವಿರುದ್ಧ ಧ್ವನಿ ಎತ್ತದಂತೆ ಮನವೊಲಿಸುವುದಕ್ಕಾಗಿ ಈ ಭೇಟಿ ನಡೆದಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದರು. ಇದಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದರು. ಈ ಬಗ್ಗೆ ನನಗೆ ಗೊತ್ತಿಲ್ಲ. ಬೆಂಗಳೂರಿಗೆ ತೆರಳಿದ ಮೇಲೆ ಸಚಿವ ಅಶ್ವತ್ಥನಾರಾಯಣ್ ಜೊತೆ ಈ ಬಗ್ಗೆ ಚರ್ಚೆ ಮಾಡಿ, ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.