NationalNewsPolitics

ಪ್ರಧಾನಿ ಭೇಟಿಯಾಗಿ ಕುಶಲೋಪರಿ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ನವದೆಹಲಿ; ಹೈಕಮಾಂಡ್‌ ಜೊತೆ ಸಭೆ ಹಿನ್ನೆಲೆಯೆಲ್ಲಿ ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಿದ್ದರು. ಇದೇ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸೌಹಾರ್ದಯುತ ಭೇಟಿ ಇದಾಗಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಮೈಸೂರು ಪೇಟೆ ತೊಡಿಸಿ, ಗಂಧದ ಮರದಿಂದ ಕೆತ್ತನೆ ಮಾಡಿದ ಅಂಬಾರಿಯನ್ನು ಉಡುಗೊಗೆಯಾಗಿ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ನೀಡಿದ ಉಡುಗೊರೆಯನ್ನು ಪ್ರಧಾನಿ ಮೋದಿ ಕುತೂಹಲದಿಂದ ವೀಕ್ಷಣೆ ಮಾಡಿದ್ದಾರೆ. ಇದೇ ವೇಳೆ ಕೆಲ ಹೊತ್ತು ಇಬ್ಬರೂ ಮಾತನಾಡಿದ್ದಾರೆ. ಪ್ರಧಾನಿ ಭೇಟಿ ನಂತರ ಸಿದ್ದರಾಮಯ್ಯ ಅವರು,  ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.

 

Share Post