National

ಸ್ಮೃತಿ ಇರಾನಿ ಮಗಳ ಕುರಿತ ಪೋಸ್ಟ್‌ ತೆಗೆಯಿರಿ; ಕೋರ್ಟ್‌ ಸೂಚನೆ

ನವದೆಹಲಿ; ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ದೆಹಲಿ ಹೈಕೋರ್ಟ್ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ ಮತ್ತು ನೆಟ್ಟಾ ಡಿಸೋಜಾ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಅಲ್ಲದೆ ಸ್ಮೃತಿ ಮತ್ತು ಅವರ ಮಗಳ ಕುರಿತ ಟ್ವೀಟ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಸೂಚಿಸಿದೆ.

ಸ್ಮೃತಿ ಇರಾನಿ ಅವರ 18 ವರ್ಷದ ಮಗಳು ಝೋಯಿಶ್‌ ಇರಾನಿ ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪುಟದಿಂದ ಸ್ಮೃತಿ ಅವರನ್ನು ವಜಾಗೊಳಿಸಬೇಕೆಂದು ಅವರು ಒತ್ತಾಯಿಸಿದ್ದರು. ತಮ್ಮ ಹಾಗೂ ತಮ್ಮ ಮಗಳ ವಿರುದ್ಧ ಆಧಾರ ರಹಿತ ಮತ್ತು ಸುಳ್ಳು ಆರೋಪಗಳನ್ನು ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಇರಾನಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ 2 ಕೋಟಿ ಮೊತ್ತದ ಮಾನಹಾನಿ ಪ್ರಕರಣ ದಾಖಲಿಸಿದ್ದರು.

Share Post