ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ; ಇಂದು 135 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್
ನವದೆಹಲಿ; ಅಭ್ಯರ್ಥಿಗಳ ಆಯ್ಕೆಗಾಗಿ ಸರ್ಕಸ್ ನಡೆಸುತ್ತಿದ್ದ ರಾಜ್ಯ ಕಾಂಗ್ರೆಸ್ ನಾಯಕರು ಕೊನೆಗೂ ಒಂದು ಪಟ್ಟಿಯನ್ನು ಕೇಂದ್ರದ ನಾಯಕ ಮುಂದೆ ತೆಗೆದುಕೊಂಡು ಹೋಗಿದ್ದಾರೆ. ಸುಮಾರು 135 ಕ್ಷೇತ್ರಗಳ ಲಿಸ್ಟ್‌ನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಗೆ ತಲುಪಿಸಲಾಗಿದೆ. ಇಂದು ದೆಹಲಿಯಲ್ಲಿ ಕೇಂದ್ರ ಚುನಾವಣೆ ಸಮಿತಿ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ವರಿಷ್ಠ ನಾಯಕರು 135 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇಂದೇ ಅಂತಿಮಗೊಳಿಸುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಇಂದು ಸಂಜೆಯೇ ಮೊದಲ ಪಟ್ಟಿ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.
ರಾಜ್ಯ ನಾಯಕರು ಸುಮಾರು 135 ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿದ್ದಾರೆ. ಇದರಲ್ಲಿ 66 ಕ್ಷೇತ್ರಗಳಿಗೆ ಒಬ್ಬೊಬ್ಬರೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಈ ಕ್ಷೇತ್ರಗಳಲ್ಲಿ ಗೊಂದಲ ಇಲ್ಲದ ಕಾರಣ, 66 ಕ್ಷೇತ್ರಗಳಿಗೆ ರಾಜ್ಯ ನಾಯಕರು ಆಯ್ಕೆ ಮಾಡಿರುವ ಹೆಸರುಗಳನ್ನೇ ಕೇಂದ್ರದ ನಾಯಕರು ಅಂತಿಮ ಮುದ್ರೆ ಒತ್ತಲಿದ್ದಾರೆ. ಆದ್ರೆ ಉಳಿದ 89 ಕ್ಷೇತ್ರಗಳಿಗೆ ತಾಲ ಇಬ್ಬಿಬ್ಬರ ಹೆಸರುಗಳನ್ನು ರಾಜ್ಯ ನಾಯಕರು ಸೂಚಿಸಿದ್ದಾರೆ. ಈ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಫೈಟ್ ಜೋರಾಗಿದೆ. ಗೆಲ್ಲುವ ಶಕ್ತಿ ಇರುವ ಆಕಾಂಕ್ಷಿಗಳು ಇಲ್ಲಿ ಹೆಚ್ಚಿದ್ದಾರೆ. ಹೀಗಾಗಿ ಇಬ್ಬಿಬ್ಬರ ಹೆಸರುಗಳನ್ನು ನೀಡಲಾಗಿದ್ದು, ಇದರಲ್ಲಿ ಒಬ್ಬೊಬ್ಬರನ್ನು ಆಯ್ಕೆ ಮಾಡುವ ಜವಾಬ್ದಾರಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಮೇಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಸಭೆಯ ನಡೆಯುತ್ತಿದ್ದು, ರಾಹುಲ್ ಗಾಂಧಿ ಸೇರಿದಂತೆ ಕೇಂದ್ರದ ಹಲವು ನಾಯಕರು ಭಾಗವಹಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲಾ ಮುಂತಾದವರು ಕೂಡಾ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.