NationalPolitics

ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿ ಸಭೆ ಅಂತ್ಯ; ಸಂಜೆಯೊಳಗೆ 49 ಕ್ಷೇತ್ರ ಲಿಸ್ಟ್‌ ರಿಲೀಸ್‌..?

ಬೆಂಗಳೂರು; ಕಾಂಗ್ರೆಸ್‌ ಎರಡನೇ ಪಟ್ಟಿ ಫೈನಲ್‌ ಮಾಡುವ ಸಲುವಾಗಿ ಇಂದು ದೆಹಲಿಯಲ್ಲಿ ನಡೆಯುತ್ತಿದ್ದ ಕೇಂದ್ರ ಚುನಾವಣಾ ಸಮಿತಿ ಸಭೆ ಮುಕ್ತಾಯವಾಗಿದೆ. ಇಂದು ಸಂಜೆಯೊಳಗೆ 49 ಕ್ಷೇತ್ರಗಳ ಎರಡನೇ ಪಟ್ಟಿ ರಿಲೀಸ್‌ ಆಗುವ ಸಾಧ್ಯತೆ ಇದೆ. ಉಳಿದ ಐವತ್ತು ಕ್ಷೇತ್ರಗಳ ಬಗ್ಗೆ ಗೊಂದಲ ಇದೆ. ಹೀಗಾಗಿ ಸಂಜೆ ಮತ್ತೆ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ. ಇಂದಿನ ಸಭೆಯಲ್ಲಿ ಹಲವು ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ನೀತಿ ಸಂಹಿತೆ ಜಾರಿಗೆ ಮುನ್ನವೇ ನಾವು 124 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಿದ್ದೆವು. ಇದೀಗ ಎರಡನೇ ಪಟ್ಟಿ ಬಗ್ಗೆ ಚರ್ಚೆ ನಡೆದಿದೆ. ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ನಾವು ಅಧಿಕಾರಕ್ಕೆ ಬಂದರೆ ಜನರಿಗಹಾಗಿ ಹೊಸ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಅವರು ಹೇಳಿದರು.

Share Post