NationalPolitics

ದೆಹಲಿಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ; ಇವತ್ತೇ ಲಿಸ್ಟ್‌ ರಿಲೀಸ್‌..?

ನವದೆಹಲಿ; ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು ಶುರುವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ದೆಹಲಿ ಕಾಂಗ್ರೆಸ್‌ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ.

ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್‌ ಸೇರಿದಂತೆ ಹವಲು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯ ನಾಯಕರು 135 ಕ್ಷೇತ್ರಗಳ ಪಟ್ಟಿಯನ್ನು ಹೈಕಮಾಂಡ್‌ಗೆ ನೀಡಿದ್ದು, ಅದು ಫೈನಲ್‌ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕೆಲ ಕ್ಷೇತ್ರಗಳಿಗೆ ಇಬ್ಬರು ಅಭ್ಯರ್ಥಿಗಳನ್ನು ಸೂಚಿಸಲಾಗಿದ್ದು, ಅದರಲ್ಲಿ ಒಬ್ಬರನ್ನು ಹೈಕಮಾಂಡ್‌ ಆಯ್ಕೆ ಮಾಡಬೇಕಿದೆ. ಇಂದೇ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಕುತೂಹಲ ಹೆಚ್ಚಾಗಿದೆ.

Share Post