NationalPolitics

ಅಭ್ಯರ್ಥಿಗಳ ಫೈನಲ್‌ಗೆ ಕಾಂಗ್ರೆಸ್‌ ಕಸರತ್ತು; ಇಂದಾದರೂ ರಿಲೀಸ್‌ ಆಗುತ್ತಾ ಕಾಂಗ್ರೆಸ್‌ ಎರಡನೇ ಪಟ್ಟಿ..?

ನವದೆಹಲಿ; ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧಪಡಿಸಲು ದೆಹಲಿಯಲ್ಲಿ ನಿನ್ನೆಯಿಂದ ಸರ್ಕಸ್‌ ನಡೆಯುತ್ತಿದೆ. ನಿನ್ನೆಯೇ 49 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್‌ ಮಾಡಲಾಗಿದೆ ಎಂದು ಹೇಳಲಾಗಿತ್ತು. ಆದ್ರೆ ಇನ್ನೂ ಚರ್ಚೆಗಳು ನಡೆಯುತ್ತಲೇ ಇವೆ. ಇಂದೂ ಕೂಡಾ ಸಂಜೆ 4.30ಕ್ಕೆ ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿ ಸಭೆ ಕರೆಯಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಸಭೆ ನಡೆಯಲಿದ್ದು, ಇಂದೂ ಕೂಡಾ ಎರಡನೇ ಪಟ್ಟಿ ಬಗ್ಗೆ ಚರ್ಚೆ ನಡೆಯಲಿದೆ.

ಇದಕ್ಕೂ ಮೊದಲು ದೆಹಲಿಯಲ್ಲಿ ಕಾಂಗ್ರೆಸ್‌ ಸ್ಕ್ರೀನಿಂಗ್‌ ಕಮಿಟಿ ಸಭೆ ನಡೆಯಿತು. ಸ್ಕ್ರೀನಿಂಗ್‌ ಕಮಿಟಿ ಅಧ್ಯಕ್ಷ ಮೋಹನ್‌ ಪ್ರಕಾಶ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಸೇರಿ ಹಲವು ನಾಯಕರು ಪಾಲ್ಗೊಂಡಿದ್ದರು.

Share Post