ಬಿಜೆಪಿ ವಿರುದ್ಧ ಕೈ ಬೆಲೆ ಏರಿಕೆ ಅಸ್ತ್ರ: ಏಪ್ರಿಲ್‌ನಲ್ಲಿ ದೇಶಾದ್ಯಂತ ಪ್ರತಿಭಟನೆಗೆ ನಿರ್ಧಾರ..?
ದೆಹಲಿ: ನೆಲಕಚ್ಚಿರುವ ಕಾಂಗ್ರೆಸ್ ಅನ್ನು ಮೇಲೆತ್ತಲು ಕೈ ಹೈಕಮಾಂಡ್ ನಿರ್ಧಾರ ಮಾಡಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ನಡೆದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿಗಳು. ರಾಜ್ಯಗಳ ಉಸ್ತುವಾರಿಗಳು ಪಾಲ್ಗೊಂಡಿರುವ ಈ ಸಭೆಯಲ್ಲಿ. ಪಕ್ಷ ಸಂಘಟನೆ ರಚನೆಗೆ ಕಾಂಗ್ರೆಸ್ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ ಎನ್ನಲಾಗುತ್ತಿದೆ.
ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಹೋರಾಟಗಳ ಮೂಲಕ ಅಧಿಕಾರಕ್ಕೆ ಬರಲು ಕೈ ಪಕ್ಷ ಯೋಜನೆ ರೂಪಿಸಿದೆ. ದೇಶದ ಪ್ರಮುಖ ಸಮಸ್ಯೆಯಾಗಿರುವ ಬೆಲೆ ಏರಿಕೆಯನ್ನೇ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ. ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರದ ವಿರುದ್ಧ ಸಮರ ಸಾರುವ ತಂತ್ರಗಳನ್ನು ರೂಪಿಸುತ್ತಿದೆ. ಏಪ್ರಿಲ್‌ನಲ್ಲಿ ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಕಾಂಗ್ರೆಸ್ ತನ್ನ ನಿಲುವನ್ನು ಶೀಘ್ರದಲ್ಲೇ ತಿಳಿಸಲಿದೆ.
ಐದು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ಸೋತಿದೆ. ಈ ಚುನಾವಣೆಯ ನಂತರ ಮತ್ತೊಮ್ಮೆ ಕಾಂಗ್ರೆಸ್ ನಾಯಕತ್ವದ ಬಗ್ಗೆ ವ್ಯಾಪಕ ಚರ್ಚೆ ನಡೆದಿದೆ. ಒಂದು ಹಂತದಲ್ಲಿ ಸೋನಿಯಾ ಗಾಂಧಿ ಪಕ್ಷದ ನಾಯಕತ್ವದಿಂದ ಕೆಳಗಿಳಿಯುತ್ತಾರೆ ಎಂಬ ಪ್ರಚಾರವೂ ಇತ್ತು. ಇದೀಗ ಮತ್ತೆ ಪಕ್ಷ ಸಂಘಟನೆಯಲ್ಲಿ ನಿರತರಾಗಿರುವ ಕೈ ಹೈಕಮಾಂಡ್ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ.