NationalPolitics

ಇಂದು 43 ಕ್ಷೇತ್ರಗಳ ಕಾಂಗ್ರೆಸ್‌ ಎರಡನೇ ಪಟ್ಟಿ ರಿಲೀಸ್‌ ಸಾಧ್ಯತೆ; ದೆಹಲಿಯಲ್ಲಿ ಗರಿಗೆದರಿದ ರಾಜಕೀಯ

ನವದೆಹಲಿ; ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕರು ಕಳೆದ ಮೂರು ದಿನಗಳಿಂದ ಕಸರತ್ತು ನಡೆಸುತ್ತಿದ್ದಾರೆ. ಎರಡನೇ ಪಟ್ಟಿ ಅಂತಿಮಗೊಳಿಸಲು ಕೇಂದ್ರ ಹಾಗೂ ರಾಜ್ಯದ ನಾಯಕರು ಅಳೆದೂತೂಗುತ್ತಿದ್ದಾರೆ. ಇಂದು ಖರ್ಗೆ  ನಿವಾಸದಲ್ಲಿ ಸಭೆ ನಡೆಯಲಿದ್ದು, ಸಭೆಯ ನಂತರ ಎರಡನೇ ಪಟ್ಟಿ ರಿಲೀಸ್‌ ಆಗುವ ಸಾಧ್ಯತೆ ಇದೆ.

ಈಗಾಗಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಉಳಿದ ನೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ. ಆದ್ರೆ ಕಳೆದ ಎರಡು ದಿನಗಳಿಂದ ಚರ್ಚೆ ನಡೆಸಿರುವ ನಾಯಕರು ಕೇವಲ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್‌ ಮಾಡಿದ್ದಾರೆ ಎನ್ನಲಾಗಿದೆ. ಇಂದು 43 ಕ್ಷೇತ್ರಗಳ ಪಟ್ಟಿ ರಿಲೀಸ್‌ ಮಾಡ್ತಾರೆ ಎಂದು ತಿಳಿದುಬಂದಿದೆ.

 

 

Share Post