NationalNewsPolitics

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ; ಖರ್ಗೆ ನೇತೃತ್ವದಲ್ಲಿ ಸಭೆ

ನವದೆಹಲಿ; ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ಸಭೆ ನಡೆಯತು. ಸಭೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿತ್ತು. ಚುನಾವಣೆಗಾಗಿ ಪ್ರಚಾರ, ಗೆಲ್ಲಲು ಬೇಕಾದ ಕಾರ್ಯತಂತ್ರ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು

ರಾಜ್ಯದಲ್ಲಿ ಪಕ್ಷದ ಕಾರ್ಯ ಚಟುವಟಿಕೆಗಳಿಗೆ ಇನ್ನಷ್ಟು ಚುರುಕು ಮುಟ್ಟಿಸುವ ಬಗ್ಗೆ ಚರ್ಚೆ ನಡೆಯಿತು. ರಾಜ್ಯ ನಾಯಕರ ಬಸ್‌ ಯಾತ್ರೆಗೆ ಸಭೆಯಲ್ಲಿ ಅಂತಿಮ ರೂಪುರೇಷೆ ನೀಡಲಾಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ರಾಜ್ಯ ಕಾರ್ಯಾಧ್ಯಕ್ಷರು ಹಾಗೂ ಹಿರಿಯ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.

Share Post