NationalPolitics

ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆ; ಪಂಚ ರಾಜ್ಯಗಳ ಚುನಾವಣೆ ಬಗ್ಗೆ ಚರ್ಚೆ

ನವದೆಹಲಿ; ಪಂಚ ರಾಜ್ಯಗಳ ಚುನಾವಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಇಂದು ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ನಡೆಯುತ್ತಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೂಡಾ ಭಾಗವಹಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಇತರ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.

  ಸಭೆಯಲ್ಲಿ ಐದು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆ, ಮಹಿಳಾ ಮೀಸಲಾತಿ, ಜಾತಿ ಗಣತಿ ಸೇರಿದಂತೆ ನಾನಾ ವಿಷಯಗಳು ಹಾಗೂ ಕಾರ್ಯತಂತ್ರಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು.

Share Post