NationalPolitics

ಸಂವಿಧಾನ ದಿನಾಚರಣೆ ಕಾರ್ಯಕ್ರಮ ಬಹಿಷ್ಕರಿಸಿದ ಪ್ರತಿಪಕ್ಷಗಳು

ನವದೆಹಲಿ:  ಸಂವಿಧಾನ ದಿನದ ಅಂಗವಾಗಿ ಸಂಸತ್‌ ಭವನದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದನ್ನು ಪ್ರತಿಪಕ್ಷಗಳು ಬಹಿಷ್ಕರಿಸಿವೆ. ಕಾಂಗ್ರೆಸ್‌, ಸಮಾಜವಾದಿ ಪಾರ್ಟಿ, ಡಿಎಂಕೆ, ಟಿಎಂಸಿ ಸೇರಿದಂತೆ 11 ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಿವೆ.

  ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಅರ್ಜುನ್ ಮೇಘವಾಲ್,  ಇಂದು ಐತಿಹಾಸಿಕ ದಿನ. ಇಂತಹ ದಿನದ ಕಾರ್ಯಕ್ರಮವನ್ನು ದೇಶವನ್ನು ದಶಕಗಳ ಕಾಲ ಆಳಿದ ಕಾಂಗ್ರೆಸ್‌ ಪಕ್ಷವೇ ಬಹಿಷ್ಕರಿಸಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಅವಮಾನಿಸಿದೆ. ಸ್ಪೀಕರ್ ಆಯೋಜಿಸಿದ್ದ ಗೌರವ ದಿನಾಚರಣೆಯನ್ನು ಬಹಿಷ್ಕರಿಸಿ, ಕಾಂಗ್ರೆಸ್ ಕೇವಲ ಕುಟುಂಬಕ್ಕೆ ಸಂಬಂಧಿಸಿದ ವ್ಯಕ್ತಿಯ ಗೌರವ ಕಾರ್ಯಕ್ರಮವನ್ನು ಮಾತ್ರ ಆಚರಿಸುತ್ತದೆ ಎನ್ನುವುದನ್ನು ಸಾಬೀತುಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್, ಬಾಬಾ ಸಾಹೇಬ್ ಅಂಬೇಡ್ಕರ್‌ ಮತ್ತು ಸರ್ದಾರ್ ಪಟೇಲ್ ಅವರಂತಹ ಮಹಾನ್ ವ್ಯಕ್ತಿಗಳ ಗೌರವ ಕಾರ್ಯಕ್ರಮವನ್ನು ಬಹಿಷ್ಕರಿಸುತ್ತದೆ ಎಂಬುದನ್ನು ಸಾಬೀತುಪಡಿಸಿದೆ ಎಂದಿದ್ದಾರೆ.

Share Post