ಕೊರೊನಾ ನಾಲ್ಕನೇ ಅಲೆ ಹಿನ್ನೆಲೆ; ಸಿಎಂಗಳ ಜೊತೆ ಮೋದಿ ಮಹತ್ವದ ಸಭೆ
ನವದೆಹಲಿ: ಮುಂದಿನ ತಿಂಗಳು ಕೊರೊನಾ ನಾಲ್ಕನೇ ದೇಶದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲಾ ರಾಜ್ಯಗಳೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡಾ ಕೊರೊನಾ ಹರಡದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮಹತ್ವದ ಸಭೆ ಕರೆದಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸಿಎಂಗಳ ಜೊತೆ ಅವರು ಚರ್ಚೆ ನಡೆಸಲಿದ್ದಾರೆ.
ರಾಜ್ಯಗಳಲ್ಲಿ ಕರೋನಾ ಸ್ಥಿತಿಗತಿಗಳು, ರಾಜ್ಯಗಳಲ್ಲಿ ಕೈಗೊಂಡಿರುವ ಮುಂಜಾಗ್ರತೆಗಳು ಸೇರಿದಂತೆ ಕೊರೊನಾ ಸಂಬಂಧಿಸಿದ ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಬಹುತೇಕ ರಾಜ್ಯಗಳ ಸಿಎಂಗಳು ಈ ಸಬೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ಸಭೆಯಲ್ಲಿ ಪಾಲ್ಗೊಂಡು ರಾಜ್ಯದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರಧಾನಿಗೆ ವಿವರಿಸಲಿದ್ದಾರೆ.