National

ಅಂದು ನಮ್ಮ ಜೊತೆ ಪ್ರತಿಭಟನೆ ಮಾಡಿದ BJP ನಾಯಕರು ಇಂದು ಮೌನವಾಗಿರುವುದೇಕೆ..?-ಡಿಕೆಶಿ ಪ್ರಶ್ನೆ

ದೆಹಲಿ: ದೆಹಲಿಯಲ್ಲಿ ಮೇಕೆದಾಟು ಯೋಜನೆ ಪಾದಯಾತ್ರೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್‌ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಈ ವೇಳೆ ನಾನು ಜಲ ಸಂಪನ್ಮೂಲ ಸಚಿವನಾಗಿದ್ದ ಸಮಯದಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಸಲ್ಲಿಸಿ, ಅದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ತದನಂತರ ಸಂಸತ್ತಿನ ಉಭಯ ಸದನಗಳಲ್ಲಿ ತಮಿಳುನಾಡಿನ ಸಂಸದರು ಪ್ರತಿಭಟನೆ ಮಾಡಿದ್ದರು.

ನಾನು ದೆಹಲಿಗೆ ಬಂದು ಬಿಜೆಪಿಯ ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿದ್ದೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ದೆಹಲಿಯಲ್ಲಿ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿದ್ವಿ, ಆಗ ಬಿಜೆಪಿಯ ನಾಯಕರಾದ ನಳೀನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಹಾಗೂ ಇತರ ನಾಯಕರ ಜೊತೆ ಮಾತನಾಡಿದ್ವಿ. ಆಗ ಅವರುಗಳೂ ಕೂಡ ನಮ್ಮ ಜತೆ ಪ್ರತಿಭಟನೆ ಮಾಡಿದ್ದರು.ಅದಕ್ಕಾಗಿ ನಾನು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದೆ.

ಅಂದು ನಮ್ಮ ಜತೆ ಹೋರಾಟ ಮಾಡಿದವರು ಇಂದು ಯೋಜನೆ ಜಾರಿ ವಿಚಾರದಲ್ಲಿ ಮೌನವಾಗಿರುವುದೇಕೆ? ಈವರೆಗೂ ಯಾಕೆ ಕಾರ್ಯರೂಪಕ್ಕೆ ತರಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕುಡಿಯುವ ನೀರಿನ ಯೋಜನೆಗೆ ಯಾವುದೇ ಅನ್ಯರಾಜ್ಯಗಳ ಅನುಮತಿ ಬೇಕಾಗಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶವಿದೆ. ಇದನ್ನು ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಹೀಗಿದ್ದರೂ ವಿಳಂಬ ಏಕೆ ಎಂದು ಅರ್ಥವಾಗುತ್ತಿಲ್ಲ

Share Post