NationalPolitics

ಮತದಾರ ಪಟ್ಟಿಯಿಂದ ಅಲ್ಪಸಂಖ್ಯಾತರ ಹೆಸರುಗಳು ಡಿಲೀಟ್‌; ಡಿ.ಕೆ.ಶಿವಕುಮಾರ್‌ ಆರೋಪ

ನವದೆಹಲಿ; ಚಿಲುಮೆ ಸಂಸ್ಥೆಗೆ ಮತದಾರರ ಸರ್ವೇ ಗುತ್ತಿಗೆ ನೀಡಲಾಗಿದ್ದು, ಇದರಲ್ಲಿ ಅಕ್ರಮ ಎಸಗಲಾಗಿದೆ. ಬಹಳಷ್ಟು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಹೀಗಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಒಂದು ಮನೆಯಲ್ಲಿ ಐದು ವೋಟುಗಳಿದ್ದರೆ ಅದರಲ್ಲಿ ಮೂವರ ಹೆಸರುಗಳು ಮತದಾರ ಪಟ್ಟಿಯಿಂದ ನಾಪತ್ತೆಯಾಗಿವೆ. ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರ ಮತಗಳ ಮೇಲೆ ಹೆಚ್ಚು ಗಮನವಿಡಲಾಗಿದೆ. ಅಲ್ಪಸಂಖ್ಯಾತರ ಹೆಸರುಗಳನ್ನು ಹೆಚ್ಚಾಗಿ ಡಿಲೀಟ್‌ ಮಾಡಲಾಗಿದೆ. ಚಿಲುಮೆ ಸಂಸ್ಥೆ ಅಷ್ಟೇ ಇದಕ್ಕೆ ಕಾರಣ ಅಲ್ಲ. ಇದರ ಹಿಂದೆ ದೊಡ್ಡ ಕೈಗಳಿವೆ ಎಂದು ಡಿ.ಕೆ.ಶಿವಕುಮಾರ್‌ ಆರೋಪ ಮಾಡಿದ್ದಾರೆ.

 

Share Post