National

ಐದನೇ ದಿನವೂ ರಾಹುಲ್‌ ವಿಚಾರಣೆ; ಕಾಂಗ್ರೆಸ್‌ನಿಂದ ಪ್ರತಿಭಟನೆ ಮುಂದುವರಿಕೆ

ನವದೆಹಲಿ; ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆ ಅಕ್ರಮ ಸಂಬಂಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನೂ ಐದನೇ ದಿನವೂ ವಿಚಾರಣೆಗೊಳಪಡಿಸಲಾಗುತ್ತಿದೆ. ಕಳೆದ ವಾರ ಮೂರು ದಿನ ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು, ಈಗ ಮತ್ತೆ ನಿನ್ನೆಯಿಂದ ಸತತವಾಗಿ ವಿಚಾರಣೆಗೊಳಪಡಿಸುತ್ತಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ರಾಹುಲ್‌ ಗಾಂಧಿ ಇವತ್ತೂ ಕೂಡಾ ವಿಚಾರಣೆಗೆ ಬಂದಿದ್ದಾರೆ.

 

ಸತತವಾಗಿ ರಾಹುಲ್‌ ವಿಚಾರಣೆ ಮಾಡುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು ಇವತ್ತು ಕೂಡಾ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

Share Post