ದೆಹಲಿ ಕೋರ್ಟ್‌ನಲ್ಲಿ ಸ್ಫೋಟ; ಒಬ್ಬರಿಗೆ ಗಾಯ
ನವದೆಹಲಿ: ಇಲ್ಲಿನ ರೋಹಿಣಿ ಕೋರ್ಟ್‌ನಲ್ಲಿ ಇಂದು ಬೆಳಗ್ಗೆ ಸಣ್ಣ ಸ್ಫೋಟ ಸಂಭವಿಸಿದ್ದು, ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಕೋರ್ಟ್ ಚೇಂಬರ್ ಸಂಖ್ಯೆ 102ರಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ಕಾರಣ ಇನ್ನೂ ತಿಳಿದು ಬಂದಿಲ್ಲ. ಲ್ಯಾಪ್‌ಟಾಪ್ ಬ್ಯಾಟರಿ ಸ್ಫೋಟಗೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಈ ದರ್ಘಟನೆಯಲ್ಲಿ ಒಬ್ಬ ಕೋರ್ಟ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಫೋಟ ಸಂಭವಿಸುತ್ತಿದ್ದಂತೆ ಡಾಗ್ ಸ್ಕ್ವ್ಯಾಡ್, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿತು.
ರಾಷ್ಟ್ರೀಯ ಭದ್ರತಾ ಪಡೆಯ ಕಮಾಂಡೋಗಳು ಸ್ಥಳ ಪರಿಶೀಲನೆ ನಡೆಸಿದರು. ಸ್ಫೋಟದ ಸ್ವರೂಪ ಮತ್ತು ಸ್ಫೋಟಕ್ಕೆ ಕಾರಣವನ್ನು ಕಲೆ ಹಾಕಲಾಗುತ್ತಿದೆ. ಇದಕ್ಕಾಗಿ ವಿಧಿ ವಿಜ್ಞಾನ ವಿಭಾಗದ ಅಧಿಕಾರಿಗಳು ಕೂಡಾ ಸ್ಥಳಕ್ಕಾಗಮಿಸಿ, ಸ್ಥಳದಲ್ಲಿ ಪತ್ತೆಯಾದ ವಸ್ತುಗಳನ್ನು ಸಂಗ್ರಹ ಮಾಡಿದ್ದಾರೆ.