10 ವರ್ಷ ಮೇಲ್ಪಟ್ಟ ಡೀಸೆಲ್ ವಾಹನಗಳ ನೋಂದಣಿ ರದ್ದು
ನವದೆಹಲಿ : ದೆಹಲಿ ಸರ್ಕಾರ ವಾಯು ಮಾಲಿನ್ಯ ತಡೆಗಟ್ಟಲು ಹಲವಾರು ಕ್ರಮಗಳನ್ನು ಅನುಸರಿಸಿದೆ. ಜನವರಿ ೧ ಕ್ಕೆ ೧೦ ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿಯನ್ನು ರದ್ದು ಮಾಡಲು ಸರ್ಕಾರ ತೀರ್ಮಾನಿಸಿದೆ.
ನೋಂದಣಿ ರದ್ದು ಮಾಡಿದ ನಂತರ ಸರ್ಕಾರ ನಿರಾಕ್ಷೇಪಣಾ ಪತ್ರ ನೀಡಲಿದೆ. ಹಾಗಾಗಿ ಈ ವಾಹನಗಳನ್ನು ಬೇರೆ ಕಡೆ ನೋಂದಣಿ ಮಾಡಿಸಿ ಬಳಸಬಹುದಾಗಿದೆ.
10 ವರ್ಷಗಳಿಗಿಂತ ಹೆಚ್ಚು ಹಳೆಯದಾದ ಡೀಸೆಲ್ ವಾಹನಗಳ ನೋಂದಣಿ ರದ್ದುಗೊಳಿಸುವ ನಿರ್ದೇಶನವನ್ನು ತಪ್ಪದೆ ಜಾರಿಗೊಳಿಸಬೇಕು ಎಂದು ಸರ್ಕಾರ ಮತ್ತೊಮ್ಮೆ ತಾಕೀತು ಮಾಡಿದೆ.