ದೆಹಲಿಯಲ್ಲಿ ವೀಕೆಂಡ್ ಕರ್ಪ್ಯೂ: ವರ್ಕ್ ಫ್ರಮ್ ಹೋಂಗೆ ಅನುಮತಿ
ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ, ಓಮಿಕ್ರಾನ್ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಪ್ಯೂ ವಿಧಿಸಿದೆ. ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ವೀಕೆಂಡ್ ನಿಷೇಧಾಜ್ಞೆ ಈ ಕೂಡಲೇ ಜಾರಿಗೆ ಬರುವಂತೆ ಆದೇಶಿಸಿದ್ದಾರೆ. ಸರ್ಕಾರಿ ಕಚೇರಿ ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್ ಮಾಡಲು ಅನುಮತಿ ನೀಡಲಾಗಿದೆ. ಖಾಸಗಿ ಕಚೇರಿಗಳಲ್ಲಿ ಶೇ.೫೦ರಷ್ಟು ಸಿಬ್ಬಂದಿಗೆ ಅವಕಾಶ ನೀಡಲಾಗಿದೆ.
ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೂ ಕೊರೊನಾ ಪಾಸಿವಿಟ್ ದೃಢಪಟಿದ್ದು. ಮನೆಯಲ್ಲೇ ಐಸೋಲೇಷನ್ ಆಗಿರುವುದಾಗಿ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಬೆನ್ನಲ್ಲೇ ವಾರಾಂತ್ಯದ ನಿಷೇಧಾಜ್ಞೆಯನ್ನು ಸರ್ಕಾರ ಜಾರಿಗೊಳಿಸಿದೆ. ಈಗಾಗಲೇ ಪರೀಕ್ಷೆಗೆ ಕಳಿಸಿರುವ ಮಾದರಿಗಳಲ್ಲಿ 84% ಮಂದಿಗೆ ಓಮಿಕ್ರಾನ್ ರೋಹ ಲಕ್ಷಣಗಳಿರುವುದು ಕಂಡು ಬಂದಿದೆ.