National

ನೋಟು ಅಮಾನ್ಯೀಕರಣ ಕಾನೂನು ಬಾಹಿರವಲ್ಲ; ಸುಪ್ರೀಂ ಮಹತ್ವದ ತೀರ್ಪು

ನವದೆಹಲಿ; 2016ರ ನೋಟ್‌ ಬ್ಯಾನ್‌ ನಿರ್ಧಾರವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ನೋಟ್‌ ಬ್ಯಾನ್‌ ಮಾಡಿರುವುದು ಯಾವುದೇ ಕಾನೂನು ಬಾಹಿರವಲ್ಲ ಎಂದು ಜಸ್ಟೀಸ್‌ ಗವಾಯಿವರ ನೇತೃತ್ವದ ಪೀಠ ಅಭಿಪ್ರಾಯ ಪಟ್ಟಿದೆ.

ಇಂತಹ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶ ಮಾಡೋದಿಲ್ಲ. ಕೇಂದ್ರ ಸರ್ಕಾರದಿಂದ ಪ್ರಸ್ತಾಪ ಬಂದಿದ್ದಕ್ಕೆ ತಪ್ಪು ಎಂದು ಹೇಳೋದಕ್ಕೆ ಆಗೋದಿಲ್ಲ ಎಂದು ಕೋರ್ಟ್‌ ತಿಳಿಸಿದೆ. 2016ರಲ್ಲಿ ಕೇಂದ್ರ ಸರ್ಕಾರ 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ, 58 ಅರ್ಜಿಗಳು ಸಲ್ಲಿಕೆಯಾಗಿದ್ದವು. ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇತ್ಯರ್ಥಪಡಿಸಿದೆ. ಜೊತೆಗೆ ಇಂತಹ ನಿರ್ಧಾರಗಳಲ್ಲಿ ಸಂಸತ್‌ ನಿರ್ಣಯವೇ ಅಂತಿಮ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

Share Post