ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣಕ್ಕೆ 20ಲಕ್ಷ ದಂಡ
ಕೋಲ್ಕತ್ತ : ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾರತ ವಾಯುಯಾನ ನಿಯಂತ್ರಣ ಸಂಸ್ಥೆಯಾಗಿರುವ ನಾಗರಿಕ ವಿಮಾನಯಾನ ನಿರ್ದೇಶನಾಲಯ 20ಲಕ್ಷ ರೂಪಾಯಿ ದಂಡ ವಿಧಿಸಿದೆ.
ವಿಮಾನ ನಿಲ್ದಾಣದಲ್ಲಿ ರನ್‌ವೇ ನಿರ್ವಹಣೆಯನ್ನು ಸೂಕ್ತವಾಗಿ ಮಾಡದ ಕಾರಣಕ್ಕಾಗಿ ದಂಡ ವಿಧಿಸಲಾಗಿದೆ ಎಂದು ವರದಿಯಾಗಿದೆ. DGCA ವಿಮಾನ ನಿಲ್ದಾಣಗಳಲ್ಲಿನ ಸುರಕ್ಷತೆ ಬಗ್ಗೆ ಆಡಿಟಿಂಗ್ ನಡೆಸಿದಾಗ ಸುರಕ್ಷತಾ ನಿಯಮಗಳನ್ನು ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದವರು ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ.
ರನ್‌ವೇಗಳಲ್ಲಿ ಪ್ರಮುಖವಾಗಿ ನಿಯಮಗಳನ್ನು ಪಾಲನೆ ಮಾಡದೇ ಇದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಕೊಲ್ಕತ್ತ ವಿಮಾನ ನಿಲ್ದಾಣಕ್ಕೆ ಈ ಕುರಿತು ಶೋಕಾಸ್ ನೋಟೀಸ್ ಕೂಡ ನೀಡಲಾಗಿತ್ತು. ಕೋಲ್ಕತ್ತ ಏರ್‌ಪೋರ್ಟ್ ಮಾರ್ಗಸೂಚಿಯಂತೆ ಕಾರ್ಯ ನಿರ್ವಹಿಸಿಲ್ಲ ಹಾಗೆಯೇ ಲೈಟ್‌ಗಳನ್ನು ಸರಿಯಾಗಿ ಅಳವಡಿಸಿಲ್ಲ ಎಂದು DGCA ಹೇಳಿದೆ.
ಈ ಕಾರಣಕ್ಕಾಗಿಯೇ 20ಲಕ್ಷ ದಂಡ ವಿಧಿಸಲಾಗಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆಯು ವರದಿ ಮಾಡಿದೆ.