NationalPolitics

ಸಂಸತ್‌ ಸದಸ್ಯತ್ವ ಅನರ್ಹತೆ ರದ್ದು; ಸಂಸತ್‌ ಭವನದಲ್ಲಿ ಕಾಣಿಸಿಕೊಂಡ ರಾಹುಲ್‌

ನವದೆಹಲಿ; ಸೂರತ್‌ ಕೋರ್ಟ್‌ ರಾಹುಲ್‌ ಗಾಂಧಿಗೆ ವಿಧಿಸಿದ್ದ ಎರಡು ವರ್ಷ ಜೈಲು ಶಿಕ್ಷೆಗೆ ಮಧ್ಯಂತರ ತಡೆ ನೀಡಿದ್ದರಿಂದ, ರಾಹುಲ್‌ ಗಾಂಧಿ ತಮ್ಮ ಸಂಸತ್‌ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಲೋಕಸಭಾ ಸಚಿವಾಲಯ ರಾಹುಲ್‌ ಗಾಂಧಿಯವರ ಸಂಸತ್‌ ಸದಸ್ಯತ್ವ ನವೀಕರಣ ಮಾಡಿ ಅಧಿಸೂಚನೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿನಿಂದ ಇಂದಿನಿಂದ ಲೋಕಸಭಾ ಕಲಾಪದಲ್ಲಿ ಪಾಲ್ಗೊಂಡಿದ್ದಾರೆ.

2019ರ ಲೋಕಸಭಾ ಚುನಾವಣೆ ವೇಳೆ ಕೋಲಾರದಲ್ಲಿ ಭಾಷಣ ಮಾಡಿದ್ದ ರಾಹುಲ್‌ ಗಾಂಧಿ, ಮೋದಿ ಉಪನಾಮ ಇರುವವರೆಲ್ಲಾ ಕಳ್ಳರು ಎಂಬ ರೀತಿಯಲ್ಲಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ಉಪನಾಮವಿರುವ ಬಿಜೆಪಿ ಶಾಸಕರೊಬ್ಬರು ಸೂರತ್‌ ಕೋರ್ಟ್‌ನಲ್ಲಿ ಮಾನನಷ್ಟು ಮೊಕದ್ದಮೆ ಹೂಡಿದ್ದರು. ಸೂರತ್‌ ಕೋರ್ಟ್‌ ರಾಹುಲ್‌ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿ ಜೈಲು ಶಿಕ್ಷೆಗೆ ಒಳಗಾದರೆ ಅವರ ಪ್ರಜಾಪ್ರತಿನಿಧಿತ್ವ ಅನರ್ಹವಾಗಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಸಚಿವಾಲಯ ಕಳೆದ ಮಾರ್ಚ್‌ 24ರಂದು ರಾಹುಲ್‌ ಗಾಂಧಿ ಸದಸ್ಯತ್ವ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಿತ್ತು.

ಆದ್ರೆ ಸುಪ್ರೀಂ ಕೋರ್ಟ್‌ ರಾಹುಲ್‌ ಗಾಂಧಿಯವರಿಗೆ ವಿಧಿಸಿರುವ ಶಿಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ಈಗ ರಾಹುಲ್‌ ತಮ್ಮ ಸದಸ್ಯತ್ವವನ್ನು ಮರಳಿ ಪಡೆದಿದ್ದಾರೆ. ರಾಹುಲ್‌ ಗಾಂಧಿ ಕಳೆದ ಚುನಾವಣೆಯಲ್ಲಿ ಕೇರಳದ ವಯನಾಡ್‌ನಿಂದ ಸ್ಪರ್ಧೆ ಮಾಡಿ ಗೆದ್ದಿದ್ದರು.

 

Share Post