NationalPolitics

ನಗರದಲ್ಲಿ ಹಾದುಹೋಗಿರುವ ಹೆದ್ದಾರಿಗಳ ಬಗ್ಗೆ ಗಡ್ಕರಿ ಜೊತೆ ಡಿಕೆಶಿ ಚರ್ಚೆ

ನವದೆಹಲಿ; ಬೆಂಗಳೂರು ನಗರದಲ್ಲಿ ಹಲವು ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಿವೆ. ನಗರದ ಒಳಗೇ ಹೆದ್ದಾರಿಗಳು ಹಾದುಹೋಗಿರುವುದರಿಂದ ಟ್ರಾಫಿಕ್‌ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್‌ ಅವರು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮಧ್ಯಾಹ್ನ 1.30ರ ಸುಮಾರಿಗೆ ಗಡ್ಕರಿಯವರನ್ನು ಭೇಟಿ ಮಾಡಿದ ಡಿ.ಕೆ.ಶಿವಕುಮಾರ್‌ ಹೆದ್ದಾರಿಗಳ ನಿರ್ವಹಣೆ ಹಾಗೂ ನಗರದಲ್ಲಿ ಹಾದುಹೋಗಿರುವ ಹೆದ್ದಾರಿಗಳಲ್ಲಿ ಓಡಾಡುವ ವಾಹನಗಳಿಗೆ ಬೇರೆ ವ್ಯವಸ್ಥೆ ಮಾಡುವ ಸಲುವಾಗಿ ಮಾತುಕತೆ ನಡೆಸಿದ್ದಾರೆ. ನಗರದಲ್ಲಿ ಹಾದುಹೋದ ಹೆದ್ದಾರಿಗಳಲ್ಲಿ ಟನಲಿಂಗ್‌ ಅಥವಾ ಫ್ಲೈಓವರ್‌ಗಳನ್ನು ನಿರ್ಮಾಣ ಮಾಡಿ ಟ್ರಾಫಿಕ್‌ ಸಮಸ್ಯೆ ತಡೆಗಟ್ಟುವ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರು ಕೇಂದ್ರ ಸಚಿವರಿಗೆ ಸಲಹೆಗಳನ್ನು ನೀಡಿದ್ದಾರೆ. ಇನ್ನು ಇದೇ ವೇಳೆ ಕೇಂದ್ರ ಸರ್ಕಾರದ ಪ್ಲ್ಯಾನ್‌ ಬಗ್ಗೆಯೂ ನಿತಿನ್‌ ಗಡ್ಕರಿ ವಿವರಿಸಿದ್ದಾರೆ ಎನ್ನಲಾಗಿದೆ.

Share Post