ಸೋನಿಯಾ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಭೇಟಿ; ಸದ್ಯದಲ್ಲೇ ಸಿಎಂ ಘೋಷಣೆ ಸಾಧ್ಯತೆ
ನವದೆಹಲಿ; ಸಿದ್ದರಾಮಯ್ಯ ಭೇಟಿ ಮುಗಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋನಿಯಾಗಾಂಧಿ ನಿವಾಸಕ್ಕೆ ಆಗಮಿಸಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್ ಮುಖದಲ್ಲಿ ಕಳೆ ಕಾಣಲಿಲ್ಲ. ಸದ್ಯ ಸೋನಿಯಾ ಗಾಂಧಿ ನಿವಾಸದ ಒಳಗೆ ಡಿ.ಕೆ.ಶಿವಕುಮಾರ್ ತೆರಳಿದ್ದು, ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸುತ್ತಿದ್ದಾರೆ.
ಹೈಕಮಾಂಡ್ ಸಿದ್ದರಾಮಯ್ಯರನ್ನು ಸಿಎಂ ಮಾಡೋದಕ್ಕೆ ನಿರ್ಧಾರ ಮಾಡಿದ್ದು, ಅಧಿಕೃತವಾಗಿ ಪ್ರಕಟಿಸುವ ಮೊದಲು ಡಿ.ಕೆ.ಶಿವಕುಮಾರ್ ಜೊತೆ ಚರ್ಚೆ ನಡೆಸಲಾಗುತ್ತಿದೆ. ಯಾವ ಸೂತ್ರ ಪರಿಗಣಿಸಲಾಗಿದೆ ಎಂಬುದು ಶೀಘ್ರದಲ್ಲೇ ತಿಳಿಯಲಿದೆ. ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ ಪಾತ್ರ ಏನು ಎಂಬುದುನ ಕೂಡಾ ಸದ್ಯದಲ್ಲೇ ಗೊತ್ತಾಗಲಿದೆ.