NationalPolitics

ಲೋಕಸಭೆಯಲ್ಲೂ ಪ್ರತಿಧ್ವನಿಸಿದ ಡಿ.ಕೆ.ಸುರೇಶ್‌ ವಿವಾದ; ಕ್ಷಮೆಯಾಚನೆಗೆ ಬಿಜೆಪಿ ಪಟ್ಟು

ನವದೆಹಲಿ; ಸಂಸದ ಡಿ.ಕೆ.ಸುರೇಶ್‌ ನಿನ್ನೆ ದೇಶವಿಭಜನೆಯಾ ಮಾತನ್ನಾಡಿದ್ದರು. ಕೇಂದ್ರ ಸರ್ಕಾರ ದಕ್ಷಿಣ ಭಾರತಕ್ಕೆ ಹಣ ನೀಡುತ್ತಿಲ್ಲ. ಹೀಗಾಗಿ ಪ್ರತ್ಯೇಕ ದೇಶದ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿಕೆ ಕೊಟ್ಟಿದ್ದರು. ಡಿ.ಕೆ.ಸುರೇಶ್‌ ಅವರ ಈ ಹೇಳಿಕೆಯನ್ನು ಸ್ವಪಕ್ಷದವರೂ ವಿರೋಧಿಸಿದ್ದಾರೆ. ಈ ನಡುವೆ ಬಿಜೆಪಿ ಸೇರಿದಂತೆ ಇತರ ಪಕ್ಷಗಳು ಡಿ.ಕೆ.ಸುರೇಶ್‌ ಹೇಳಿಕೆಯನ್ನು ಖಂಡಿಸಿವೆ. ಲೋಕಸಭೆ ಹಾಗೂ ರಾಜ್ಯಸಭೆ ಎರಡರಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ.

ಡಿ.ಕೆ.ಸುರೇಶ್‌ ಕ್ಷಮೆಯಾಚನೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಸೇರಿದಂತೆ ಹಲವರು ಲೋಕಸಭೆಯಲ್ಲಿ ಒತ್ತಾಯ ಮಾಡಿದ್ದಾರೆ. ಕರ್ನಾಟಕದ ಸಂಸದ ಡಿ.ಕೆ.ಸುರೇಶ್ ದೇಶವನ್ನು ಇಬ್ಭಾಗ ಮಾಡುವ ಮಾತನ್ನಾಡಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಡಿ.ಕೆ.ಸುರೇಶ್ ಅವರು ಕರ್ನಾಟಕದ ಉಪಮುಖ್ಯಮಂತ್ರಿಯ ಸಹೋದರರಾಗಿದ್ದಾರೆ. ಸಂಸದರು ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸುತ್ತೇವೆ. ಆದರೆ ಕಾಂಗ್ರೆಸ್ ನಾಯಕರು ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ನಾಯಕರು ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.

 

Share Post