CrimeNational

ನಿಂತಿದ್ದ ಬಸ್‌ಗೆ ಡಬಲ್‌ ಡೆಕ್ಕರ್‌ ಬಸ್‌ ಡಿಕ್ಕಿ; ಎಂಟು ಮಂದಿ ದಾರುಣ ಸಾವು

ಬಾರಾಬಂಕಿ; ಪೂರ್ವಾಂಚಲ್‌ ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ನಿಂತಿದ್ದ ಡಬಲ್‌ ಡೆಕ್ಕರ್‌ ಬಸ್‌ಗೆ ದೆಹಲಿಗೆ ಹೊರಟಿದ್ದ ಡಬಲ್‌ ಡೆಕ್ಕರ್‌ ಬಸ್‌ ಡಿಕ್ಕಿ ಹೊಡೆದಿದ್ದು, ಎಂಟು ಪ್ರಯಾಣಿಕರು ಇಹಲೋಕ ತ್ಯಜಿಸಿದ್ದಾರೆ. 

 

ದುರಂತದಲ್ಲಿ  16 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಿಹಾರದ ಸೀತಾಮರ್ಹಿಯಿಂದ ಬರುತ್ತಿದ್ದ ಬಸ್ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಮತ್ತೊಂದು ಡಬಲ್‌ ಡೆಕ್ಕರ್‌ ಬಸ್‌ಗೆ ಡಿಕ್ಕಿ ಹೊಡೆದಿದೆ.

 

 

 

 

Share Post