National

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ಸ್ವೀಕಾರ

ನವದೆಹಲಿ;  ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು ಅಧಿಕಾರ ಸ್ವೀಕರಿಸಿದರು. ಸಂಸತ್ತಿನಲ್ಲಿ ಸುಪ್ರೀಂ ಕೋರ್ಟ್‌ ಸಿಜೆಐ ರಮಣ ಅವರು ದ್ರೌಪದಿ ಮುರ್ಮು ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಮೂಲಕ ದ್ರೌಪದಿ ಮುರ್ಮು ಅವರು ದೇಶದ ರಾಷ್ಟ್ರಪತಿಯಾಗಿ ಅಧಿಕಾರಸ್ವೀಕರಿಸಿದ ಎರಡನೇ ಮಹಿಳೆ ಹಾಗೂ ಮೊದಲು ಬುಡಕಟ್ಟು ಜನಾಂಗ ಮಹಿಳೆ ಎನಿಸಿಕೊಂಡರು.  

 

ಪ್ರಧಾನಿ ನರೇಂದ್ರ ಮೋದಿ, ನಿರ್ಗಮಿತ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

 

Share Post