ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ; ಇಂದು ವೇಳಾಪಟ್ಟಿ ಪ್ರಕಟ
ನವದೆಹಲಿ; ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆದಿದೆ. ಇಂದು ಈ ಎರಡೂ ರಾಜ್ಯಗಳ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗಲಿದೆ. ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾಧಿಕಾರಿ ಸುದ್ದಿಗೋಷ್ಠಿ ನಡೆಸಲಿದ್ದು, ಅದರಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟ ಮಾಡಲಿದ್ದಾರೆ.
ಗುಜರಾತ್ ಸರ್ಕಾರದ ಅವಧಿ 2023ರ ಫೆಬ್ರವರಿ 18 ರಂದು ಮುಕ್ತಾಯವಾಗಲಿದೆ. ಹಿಮಾಚಲ ಪ್ರದೇಶ ಸರ್ಕಾರದ ಅವಧಿ ಜನವರಿ 8, 2023ಕ್ಕೆ ಅಂತ್ಯವಾಗುತ್ತೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದು, ಇಂದು ವೇಳಾಪಟ್ಟಿ ಘೋಷಣೆ ಮಾಡಲಿದೆ ಎಂದು ತಿಳಿದುಬಂದಿದೆ.