National

ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ; ಜುಲೈ 30ಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ; ಡಿ.ಕೆ.ಶಿವಕುಮಾರ್‌ ಹಾಗೂ ಇತರೆ ನಾಲ್ವರು ಆರೋಪಿಗಳ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ಇ.ಡಿ ಕೋರ್ಟ್ ಜುಲೈ 30ಕ್ಕೆ ಮುಂದೂಡಿದೆ. ಜುಲೈ 30ರಂದು ಡಿ.ಕೆ.ಶಿವಕುಮಾರ್‌ ಜಾಮೀನು ಅರ್ಜಿ ಭವಿಷ್ಯ ನಿರ್ಧಾರವಾಗಲಿದೆ.

ಡಿಕೆಶಿಗೆ ನೀಡಿರುವ ಜಾಮೀನು ನವೀಕರಿಸಲು ವಕೀಲರು ಮನವಿ ಸಲ್ಲಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇ.ಡಿ ಪರ ವಕೀಲರು, ಡಿಕೆಶಿ ಅವರಿಗೆ ಜಾಮೀನು ನೀಡಿರುವುದು ದೆಹಲಿ ಹೈಕೋರ್ಟ್, ಇಡಿ ವಿಶೇಷ ನ್ಯಾಯಾಲಯದಲ್ಲಿ ಅಲ್ಲ ಎಂದು ವಾದಿಸಿದರು. ಅಲ್ಲದೆ, ಈ ನ್ಯಾಯಾಲಯ ಜಾಮೀನನ್ನು ನಿರಾಕರಿಸಬೇಕು ಎಂದರು. ಇಡಿ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆಶಿ ಪರ ವಕೀಲರು, ಇದೇ ಕೋರ್ಟ್ ಕಾರ್ತಿ ಚಿದಂಬರಂಗೆ ಜಾಮೀನು ನೀಡಿದೆ. ಡಿಕೆಶಿಗೂ ಜಾಮೀನು ನೀಡಬಹುದು ಎಂದು ವಾದಿಸಿದರು. ವಾದ–ಪ್ರತಿವಾದ ಆಲಿಸಿದ ಇ.ಡಿ ನ್ಯಾಯಾಲಯವು ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿತು.

Share Post